- Tuesday
- May 6th, 2025

ಮಡಪ್ಪಾಡಿ ಗ್ರಾಮ ಪಂಚಾಯಿತಿನಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವದ ಆಚರಣೆ ಕುರಿತು ಮತ್ತು ''ಹರ್ ಘರ್ ತಿರಂಗಾ '' ಕಾರ್ಯಕ್ರಮದ ಕುರಿತು ಪೂರ್ವಭಾವಿ ಸಭೆಯನ್ನು ಆಗಸ್ಟ್ 8ರಂದು ನಡೆಸಲಾಯಿತು. ನಂತರ ಮನೆಮನೆಗೂ ರಾಷ್ಟ್ರಧ್ವಜವನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ,ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು, ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂಘ ಸಂಸ್ಥೆಗಳ ಪ್ರತಿನಿಧಿಗಳು,...

ನೆಹರು ಸ್ಮಾರಕ ಪದವಿಪೂರ್ವ ಕಾಲೇಜು ಅರಂತೋಡು ಇಲ್ಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ದೈನಂದಿನ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ನಡೆಯಿತು.ಕಾಲೇಜನ ಸಂಚಾಲಕ , ಶ್ರೀ ಕೆ ಆರ್ ಗಂಗಾಧರ್ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿ, ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ, ಶಿಸ್ತು, ಸಂಯಮ, ಉತ್ತಮ ನಾಯಕತ್ವ ಬೆಳೆಸುವಲ್ಲಿ ಎನ್ಎಸ್ಎಸ್ ವೇದಿಕೆ ಕಲ್ಪಿಸುತ್ತವೆ ಎಂದರು.ಮುಖ್ಯ ಅತಿಥಿಗಳಾಗಿ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ...

ದೇವಚಳ್ಳ ಗ್ರಾಮ ಪಂಚಾಯತ್ ವತಿಯಿಂದ ಶಾಲೆ ಮತ್ತು ಅಂಗನವಾಡಿಗಳಿಗೆ ರಾಷ್ಟ್ರಧ್ವಜ ವಿತರಣೆ ಕಾರ್ಯಕ್ರಮ ಇಂದು ನಡೆಯಿತು. ಆಗಸ್ಟ್ 15 ರಂದು ವಿಜೃಂಭಣೆ ಯಿಂದ ಸ್ವಾತಂತ್ರೋತ್ಸವದ ಆಚರಣೆ ಮತ್ತು ಗ್ರಾಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದವರಿಗೆ ಗೌರವಾರ್ಪಣೆ ನಡೆಸುವುದೆಂದು ತೀರ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಸುಳ್ಯ ತಾಲೂಕು ಸಂಜೀವಿನಿ ಒಕ್ಕೂಟದ ಅಧ್ಯಕ್ಷ ಅವಿರೋಧವಾಗಿ ಆಯ್ಕೆಯಾದ ಯಶೋದಾ ಬಾಳೆಗುಡ್ಡೆಯವರನ್ನು ಸನ್ಮಾನಿಸಲಾಯಿತು....

ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 2021-22 ನೇ ಸಾಲಿನಲ್ಲಿ ಸಂಘದ ಅತ್ಯುತ್ತಮ ಕಾರ್ಯನಿರ್ವಹಣೆಗಾಗಿ ಪ್ರೋತ್ಸಾಹಕ ಪ್ರಶಸ್ತಿ ಆಯ್ಕೆಗೊಂಡಿದ್ದು ಆ.5 ರಂದು ಮಂಗಳೂರಿನಲ್ಲಿ ಜರುಗಿದ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮಹಾಸಭೆಯಲ್ಲಿ ಪ್ರಶಸ್ತಿ ಪ್ರದಾನ ನಡೆಯಿತು. ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ...

ನೆಲ್ಲೂರು ಕೆಮ್ರಾಜೆ ಗ್ರಾಮದ ಚೇತನ್ ಕುಮಾರ್ ದಿನಾಂಕ 13.05.2022 ರಂದು ಎಂಬುವವರು ಚಲಾಯಿಸುತ್ತಿದ್ದ ಕೆಎ.21ವೈ 4185 ವಾಹನದಲ್ಲಿ ಸುಳ್ಯ ಕಡೆಯಿಂದ ತನ್ನ ಸಹ ಸವಾರ ಶಶಿಕಾಂತ್ ಎಂಬುವವನನ್ನು ಕೂರಿಸಿಕೊಂಡು ಮಿತ್ತಮಜಲು ತಲುಪುತ್ತಿದ್ದಂತೆ ಸುಳ್ಯ ಕಡೆಗೆ ಬರುತ್ತಿದ್ದ ಪಿಕ್ ಅಪ್ ವಾಹನದ ಚಾಲಕ ಅತಿವೇಗ ಹಾಗೂ ಅಜಾಗರೂಕತೆಯಿಂದ ರಸ್ತೆಯ ತಪ್ಪು ಬದಿಗೆ ಬಂದು ಮೋಟಾರ್ ಸೈಕಲ್ ಗೆ...

ಸುಳ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ವ್ಯವಸಾಯಿಕ ಸಂಘಕ್ಕೆ ಡಿ.ಸಿ.ಸಿ. ಬ್ಯಾಂಕ್ ವಿಶೇಷ ಪ್ರೋತ್ಸಾಹಕ ಪ್ರಶಸ್ತಿ ಲಭಿಸಿದೆ. ಆ.5 ರಂದು ಮಂಗಳೂರಿನಲ್ಲಿ ನಡೆದ ಡಿ.ಸಿ.ಸಿ. ಬ್ಯಾಂಕ್ ಮಹಾಸಭೆಯಲ್ಲಿ ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷ ಡಾ.ಎಂ. ಎನ್. ರಾಜೇಂದ್ರ ಕುಮಾರ್ ಪ್ರಶಸ್ತಿ ಪ್ರದಾನ ಗೈದರು. ಸುಳ್ಯ ಸಿ.ಎ. ಬ್ಯಾಂಕ್ ಅಧ್ಯಕ್ಷ ಬಾಲಗೋಪಾಲ ಸೇರ್ಕಜೆ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್...

ಆಲೆಟ್ಟಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಇದರ 2021 -22 ಸಾಲಿನ ಸಮಗ್ರ ಕಾರ್ಯಚಟುವಟಿಕೆಗೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪ್ರಶಸ್ತಿಯನ್ನು ನೀಡಲಾಯಿತು. ಬ್ಯಾಂಕಿನ ಅಧ್ಯಕ್ಷರಾದ ಡಾ. ಎಂ.ಎನ್.ರಾಜೇಂದ್ರ ಕುಮಾರ್‌ರವರಿಂದ ಮಂಗಳೂರಿನ ಜಿಲ್ಲಾ ಬ್ಯಾಂಕಿನಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಪ್ರಶಸ್ತಿ ಮತ್ತು ಸ್ಮರಣಿಕೆಯನ್ನು ಸಂಘದ `ಅಧ್ಯಕ್ಷ ಶ್ರೀಪತಿ ಭಟ್ ಮಜಿಗುಂಡಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿನಕರ...

ನೆಲ್ಲೂರು ಕೆಮ್ರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಇದರ 2021-22 ಸಾಲಿನ ಸಮಗ್ರ ಕಾರ್ಯಚಟುವಟಿಕೆಗೆ ದ.ಕ. ಜಿಲ್ಲಾ ಡಿಸಿಸಿ ಬ್ಯಾಂಕ್ ಕೊಡಮಾಡುವ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪ್ರಶಸ್ತಿ ಲಭಿಸಿದೆ. ಬ್ಯಾಂಕಿನ ಅಧ್ಯಕ್ಷರಾದ ಡಾ. ಎಂ. ಎನ್ ರಾಜೇಂದ್ರ ಕುಮಾರ್ ರವರು ಆ.05 ರಂದು ಮಂಗಳೂರಿನ ಜಿಲ್ಲಾ ಬ್ಯಾಂಕಿನಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಸಂಘದ...

ಬ್ರೈನ್ ಟ್ಯೂಮರ್ ಕಾಯಿಲೆಯಿಂದ ಬಳಲುತ್ತಿರುವ ಪೇಲ್ತಡ್ಕ ಯೋಗೀಶ್ ರವರ ಪುತ್ರಿ ಖುಷಿ ಯವರ ಚಿಕಿತ್ಸಾ ವೆಚ್ಚಕ್ಕಾಗಿ ರಾಜ್ಯ ಒಕ್ಕಲಿಗ ಸಂಘದ ಉಪಾಧ್ಯಕ್ಷರು ಹಾಗೂ ಎ.ಓ.ಎಲ್.ಇ. ಪ್ರಧಾನ ಕಾರ್ಯದರ್ಶಿ ಡಾ| ಕೆ.ವಿ ರೇಣುಕಾಪ್ರಸಾದ್ ರವರು ಹತ್ತು ಸಾವಿರ ರೂಪಾಯಿ ನೀಡಿದರು. ಅರಂತೋಡು ಸೊಸೈಟಿ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ಹಾಗೂ ಉಪಾಧ್ಯಕ್ಷ ದಯಾನಂದ ಕುರುಂಜಿಯವರು ಚೆಕ್ ಪಡೆದುಕೊಂಡರು.

ಪೆರುವಾಜೆ ಗ್ರಾಮದ ಭಾವೈಕ್ಯ ಮಹಿಳಾ ಮಂಡಲದ ನೂತನ ಪದಾಧಿಕಾರಿಗಳ ಆಯ್ಕೆಯು ಆ.08 ರಂದು ನಡೆಯಿತು.ಮಹಿಳಾ ಮಂಡಲದ ಅಧ್ಯಕ್ಷರಾಗಿ ಪ್ರಮೀಳಾ ಶೆಟ್ಟಿ,ಉಪಾಧ್ಯಕ್ಷರಾಗಿ ಭಾಗ್ಯಲಕ್ಷ್ಮಿ ಅರ್ನಾಡಿ, ಕಾರ್ಯದರ್ಶಿಯಾಗಿ ಸುಮಲತಾ ಸುನಿಲ್, ಜತೆ ಕಾರ್ಯದರ್ಶಿಯಾಗಿ ಯಶೋಧಾ, ಕೋಶಾಧಿಕಾರಿಯಾಗಿ ರಾಗಿಣಿ ಆಯ್ಕೆಯಾದರು.ನಿರ್ದೇಶಕರಾಗಿ ಪ್ರೇಮ ಕೊಲ್ಯ, ವನಿತಾ ಸಾರಕೆರೆ, ಸುಜಾತ ಪದ್ಮನಾಭ, ವೀಣಾ ಕೊಲ್ಯ, ಸವಿತಾ, ಅಶ್ವಿನಿ ಆಯ್ಕೆಯಾದರು.

All posts loaded
No more posts