Ad Widget

ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಶ್ರೀ ಗಣೇಶೋತ್ಸವ

ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಆ.31ರಿಂದ ಸೆ.01ರವರೆಗೆ ಸಾರ್ವಜನಿಕ ಸಾಂಸ್ಕೃತಿಕ ಗಣೇಶೋತ್ಸವ ಸಮಿತಿ, ವಿರಾಟ್ ಫ್ರೆಂಡ್ಸ್ ಬೆಳ್ಳಾರೆ ವತಿಯಿಂದ 51ನೇ ವರ್ಷದ ಗಣೇಶೋತ್ಸವ ಆಚರಣೆ ನಡೆಯಿತು.

. . . . . . . . .

ಬೆಳಿಗ್ಗೆ ಗಂಟೆ 8.00ಕ್ಕೆ ಶ್ರೀ ಗಣಪತಿ ಪ್ರತಿಷ್ಠೆ ನಡೆದು ನಂತರ ವಿವಿಧ ಸ್ಪರ್ಧೆಗಳು ನಡೆದವು.ಗಣಪತಿ ಹವನ ಮಧ್ಯಾಹ್ನ ಗಂಟೆ 12.30ಕ್ಕೆ ಮಹಾಪೂಜೆ, ಅನ್ನಸಂತರ್ಪಣೆ ನಡೆಯಿತು. ಸಂಜೆ ವೈಯಕ್ತಿಕ ರಂಗಪೂಜೆ, ಧಾರ್ಮಿಕ ಸಭೆ ನಡೆಯಿತು. ರಾತ್ರಿ ಗಂಟೆ 8.00ಕ್ಕೆ ಸಾಮೂಹಿಕ ಸರ್ವ ದೀಪಾಲಂಕಾರ ಸಹಿತ ರಂಗಪೂಜೆ ಮಹಾಪೂಜೆ ಮತ್ತು ಅನ್ನಸಂತರ್ಪಣೆ ನಡೆದ ರಾತ್ರಿ 9.30ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಸಂಜೆಯ ಧಾರ್ಮಿಕ ಸಭೆಯ ಅಧ್ಯಕ್ಷತೆಯನ್ನು ವಿರಾಟ್ ಫ್ರೆಂಡ್ಸ್ ಬೆಳ್ಳಾರೆಯ ಅಧ್ಯಕ್ಷ ಮನೋಜ್ ಶೆಟ್ಟಿ ವಹಿಸಿದ್ದರು. ಈ ಸಂದರ್ಭದಲ್ಲಿ ಗುರುಪುರ ಕೈಕಂಬದ ಶ್ರೀ ವಜ್ರದೇಹಿ ಮಠದ ಶ್ರೀ ಶ್ರೀ ರಾಜಶೇಖರಾನಂದ ಸ್ವಾಮೀಜಿ ಆಶೀರ್ವಚನ. ರಾತ್ರಿ ಗಂಟೆ 10.00 ರಿಂದ “ಅಜ್ಜ ಅಜ್ಜ ಕೊರಗಜ್ಜ” ಯಕ್ಷಗಾನ ಬಯಲಾಟ ನಡೆಯಿತು.

. . . . . . .

ಸೆ.01 ರಂದು ಬೆಳಿಗ್ಗೆ ಶ್ರೀ ಗಣಪತಿ ಪೂಜೆ, ಶ್ರೀ ಗಣಪತಿ ಹವನ ,ಶ್ರೀ ಸತ್ಯಗಣಪತಿ ವ್ರತ ಪೂಜೆ, ವಿವಿಧ ಭಜನಾ ಮಂಡಳಿಯವರಿಂದ ಭಜನಾ ಕಾರ್ಯಕ್ರಮ ನಡೆಯಿತು. ಮದ್ಯಾಹ್ನ 12.30ಕ್ಕೆ ಮಹಾಪೂಜೆ,ಪ್ರಸಾದ ವಿತರಣೆ ,ಅನ್ನಸಂತ ವಿತರಣೆ. ಸಂಜೆ ಮಹಾಪೂಜೆ,ಮಂಗಳಾರತಿ, ಪ್ರಸಾದ ವಿತರಣೆ ನಡೆದ ಬಳಿಕ ವಿಜೃಂಭಣೆಯ ಶೋಭಾಯಾತ್ರೆ ನಡೆಯಲಿದೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading