ಕಾಲೇಜಿನಲ್ಲಿ ಅನ್ಯಧರ್ಮದ ವಿದ್ಯಾರ್ಥಿಗಳು ಪರಸ್ಪರ ಪ್ರೀತಿಸುತ್ತಿದ್ದರೆನ್ನುವ ಕಾರಣಕ್ಕೆ ಅನ್ಯಕೋಮಿನ ವಿದ್ಯಾರ್ಥಿಯ ಮೇಲೆ ವಿದ್ಯಾರ್ಥಿಗಳ ಗುಂಪೊಂದು ಹಲ್ಲೆ ನಡೆಸಿ ಗಂಭೀರವಾಗಿ ಗಾಯಗೊಳಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಲೀಸರು ಒಂಬತ್ತು ಮಂದಿಯನ್ನು ಅರೆಸ್ಟ್ ಮಾಡಿದ್ದರು. ನ್ಯಾಯಾಲಯ ಎಲ್ಲಾ ಅರೋಪಿಗಳನ್ನು ಜಾಮೀನು ಮುಖಾಂತರ ಬಿಡುಗಡೆ ಮಾಡಿದೆ.
ಸುಳ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿರುವ ಮುಸ್ಲಿಂ ಯುವಕ ಸನೀಫ್ ಮತ್ತು ಅದೇ ಕಾಲೇಜಿನ ಯುವತಿ ಪರಸ್ಪರ ಪ್ರೀತಿಸುತ್ತಿದ್ದರೆನ್ನಲಾಗಿತ್ತು. ಇವರಿಗೆ ಮೊದಲೇ ಸೂಚನೆ ನೀಡಿದ್ದರೂ ತಮ್ಮ ಮಾತನ್ನು ಕೇಳದೇ ಇದ್ದುದರಿಂದ ಕೆರಳಿದ ವಿದ್ಯಾರ್ಥಿಗಳ ಗುಂಪೊಂದು ಆ.30 ರಂದು ಕಾಲೇಜು ಮೈದಾನಕ್ಕೆ ಯುವಕನನ್ನು ಕರೆದು ಗಂಭೀರವಾಗಿ ಹಲ್ಲೆ ನಡೆಸಿದ್ದರು.
ಈ ಬಗ್ಗೆ ಸನೀಫ್ ಸುಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾನೆ. ದೂರಿನ ಅನ್ವಯ ಪೊಲೀಸರು ದೀಕ್ಷಿತ್, ಧನುಷ್, ಪ್ರಜ್ವಲ್, ತನುಜ್, ಅಕ್ಷಯ್, ಮೋಕ್ಷಿತ್, ಗೌತಮ್ ಹಾಗೂ ಸಹಕಾರ ನೀಡಿದ ಚರಣ್ ಮತ್ತು ಪವನ್ ಸೇರಿ ಒಟ್ಟು ಒಂಬತ್ತು ಮಂದಿಯ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ನ್ಯಾಯಾಲಯ ಎಲ್ಲಾ ಅರೋಪಿತರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ. ಈ ಆರೋಪಿಗಳ ವಿರುದ್ಧ ಐಪಿಸಿ ಕಲಂ 143, 147, 148.323.324.506 ಜೊತೆಗೆ 149ರಂತೆ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.