Ad Widget

ಎಲಿಮಲೆ : ಸ್ವಚ್ಚತಾ ಸಪ್ತಾಹ ದಿನಾಚರಣೆ

ಸರಕಾರಿ ಪ್ರೌಢಶಾಲೆ ಎಲಿಮಲೆ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ದೇವಚಳ್ಳ ಇವುಗಳ ಜಂಟಿ ಆಶ್ರಯದಲ್ಲಿ ಸ್ವಚ್ಛತಾ ಸಪ್ತಾಹ ದಿನವನ್ನು ಸೆ.1 ರಂದು ಎಲಿಮಲೆಯ ಪರಿಸರದಲ್ಲಿ ನಡೆಸಲಾಯಿತು. ಸುಬ್ರಹ್ಮಣ್ಯ ಪೊಲೀಸ್ ಠಾಣಾಧಿಕಾರಿ ಮಂಜುನಾಥ್ ಟಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಗ್ರಾಮ ಪಂಚಾಯತ್ ಸದಸ್ಯರಾದ ಶೈಲೇಶ್ ಅಂಬೆಕಲ್ಲು ಪರಿಸರ ಸ್ವಚ್ಛತೆ ಬಗ್ಗೆ ಮಾಹಿತಿ ನೀಡುವುದರೊಂದಿಗೆ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಗುರುಗಳಾದ ಶ್ರೀಧರ ಗೌಡ ರವರು ಪರಿಸರ ಸಂರಕ್ಷಣೆಯಲ್ಲಿ ಸಮುದಾಯದ ಪಾತ್ರ ಬಗ್ಗೆ ಮಾತನಾಡಿದರು. ವಾಹನ ಚಾಲಕ ಮಾಲಕರ ಸಂಘದ ಅಧ್ಯಕ್ಷ ಸುನಿಲ್ ಸುಳ್ಳಿ ಉಪಸ್ಥಿತರಿದ್ದರು. ಸಮಾಜ ವಿಜ್ಞಾನ ಶಿಕ್ಷಕರಾದ ವಸಂತ್ ನಾಯಕ್ ರವರು ಪ್ರತಿಜ್ಞಾವಿಧಿಯನ್ನು ಬೋಧಿಸುವುದರೊಂದಿಗೆ ಕಾರ್ಯಕ್ರಮವನ್ನು ನಿರೂಪಿಸಿದರು. ಅಧ್ಯಾಪಕ ವೃಂದ,ವಿದ್ಯಾರ್ಥಿಗಳು ಹಾಗೂ ಪರಿಸರ ಪ್ರೇಮಿಗಳು ಎಲಿಮಲೆ ಪರಿಸರದಲ್ಲಿ ಸ್ವಚ್ಛತಾ ಕಾರ್ಯ ನಡೆಸಿದರು. ಮುಖ್ಯ ಶಿಕ್ಷಕರಾದ ಶ್ರೀಮತಿ ಸಂಧ್ಯಾ ಕೆ ಸ್ವಾಗತಿಸಿದರು. ಶಿಕ್ಷಕರಾದ ಮುರಳೀಧರ ಪುನ್ಕುಟ್ಟಿ ವಂದಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading