Ad Widget

ತಾಲೂಕು ಮಟ್ಟದ ದಸರಾ ಕ್ರೀಡಾಕೂಟಕ್ಕೆ ಸಚಿವ ಅಂಗಾರ ಚಾಲನೆ

ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದಕ್ಷಿಣ ಕನ್ನಡ, ತಾಲೂಕು ಪಂಚಾಯತ್ ಸುಳ್ಯ, ಗ್ರಾಮ ಪಂಚಾಯತ್ ಗುತ್ತಿಗಾರು ಮತ್ತು ವೀರ ಮಾರುತಿ ಸ್ಪೋರ್ಟ್ಸ್ ಕ್ಲಬ್ ಗುತ್ತಿಗಾರು ಇವರ ಸಂಯುಕ್ತ ಆಶ್ರಯ ದಲ್ಲಿ ಸುಳ್ಯ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ – 2022-23 ಗುತ್ತಿಗಾರಿನ ಪ್ರಾಥಮಿಕ ಶಾಲೆಯ ವಠಾರದಲ್ಲಿ ನಡೆಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಮೀನುಗಾರಿಕೆ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಉದ್ಘಾಟಿಸಿದರು.

. . . . . . . . .

ಗುತ್ತಿಗಾರು ಗ್ರಾ.ಪಂ. ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ವೆಂಕಟ್ ವಳಲಂಬೆ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಎ.ವಿ.ತೀರ್ಥರಾಮ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರವಿ ನಾಯಕ್, ಗುತ್ತಿಗಾರು, ಸ.ಮಾ.ಹಿ.ಪ್ರಾ.ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷ ವೆಂಕಟ್ ದಂಬೆಕೋಡಿ, ಗುತ್ತಿಗಾರು ಗ್ರಾ.ಪಂ. ಸದಸ್ಯೆ ಶ್ರೀಮತಿ ಸುಮಿತ್ರ ಮೂಕಮಲೆ, ಮಂಜುಳಾ ಮುತ್ಲಾಜೆ, ಮಾಯಿಲಪ್ಪ ಕೊಂಬೊಟ್ಟು, ಗುತ್ತಿಗಾರು ಸ.ಪ.ಪೂ.ಕಾಲೇಜು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಲೋಕೇಶ್ವರ ಡಿ.ಆರ್., ಯುವಜನ ಸಂಯುಕ್ತ ಮಂಡಳಿಯ ಅಧ್ಯಕ್ಷ ದಯಾನಂದ ಕೇರ್ಪಳ, ಸ.ಹಿ.ಪ್ರಾ.ಶಾಲೆ ಗುತ್ತಿಗಾರು ಇದರ ಮುಖ್ಯ ಶಿಕ್ಷಕಿ ಶ್ರೀಮತಿ ಉಮಾವತಿ, ವೀರಮಾರುತಿ ಸ್ಪೋರ್ಟ್ಸ್ ಕ್ಲಬ್ ಗುತ್ತಿಗಾರು ಇದರ ಗೌರವಾಧ್ಯಕ್ಷ ಮಾಧವ ಎರ್ದಡ್ಕ, ಅಧ್ಯಕ್ಷ ಅಚ್ಚುತ ಗುತ್ತಿಗಾರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಅನಾರೋಗ್ಯದಿಂದಿರುವ ವಿದ್ಯಾರ್ಥಿನಿ ಸಮೀಕ್ಷಾ ಇವಳ ಚಿಕಿತ್ಸೆಗೆ ಧನ ಸಂಗ್ರಹ ಅಭಿಯಾನಕ್ಕೆ ಸಚಿವ ಅಂಗಾರ ಚಾಲನೆ ನೀಡಿದರು.

. . . . . . .

ನೋಡೆಲ್ ಅಧಿಕಾರಿ ದೇವರಾಜ್ ಮುತ್ಲಾಜೆ ಸ್ವಾಗತಿಸಿದರು. ಸ.ಪ್ರೌ.ಶಾಲೆಯ ಮುಖ್ಯಗುರುಗಳಾದ ಹೆರಾಲ್ಡ್ ನೆಲ್ಸನ್ ಕ್ಯಾಸ್ತಲಿನೋ ವಂದಿಸಿದರು. ಶಿಕ್ಷಕ ಶಶಿಧರ ಮಾವಿನಕಟ್ಟೆ ಕಾರ್ಯಕ್ರಮ ನಿರೂಪಿಸಿದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading