ಪೆರಾಜೆ ಗ್ರಾಮದ ಬಂಗಾರಕೋಡಿ ಗಾಂಧಿಪ್ರಸಾದ್ ಅಲ್ಪ ಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಪೆರಾಜೆ ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಇವರು ಪೆರಾಜೆ ಸಹಕಾರಿ ಸಂಘದ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದರು. ಪೆರಾಜೆ ಯುವಶಕ್ತಿ ಕ್ರೀಡಾ ಮತ್ತು ಕಲಾ ಸಂಘದ ಮಾಜಿ ಅಧ್ಯಕ್ಷರಾಗಿ, ಅಲ್ಲದೆ ಹಲವು ಸಂಘ ಸಂಸ್ಥೆಗಳಲ್ಲಿ ಸಕ್ರೀಯರಾಗಿದ್ದರು. ಉತ್ತಮ ನಾಯಕತ್ವ ಗುಣ ಹೊಂದಿದ್ದ ಇವರು ಇತ್ತೀಚೆಗೆ ಅನಾರೋಗ್ಯಕ್ಕೀಡಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ನಿಧನರಾದರು ಎಂದು ತಿಳಿದು ಬಂದಿದೆ. ಇವರು ತಂದೆ, ತಾಯಿ, ಪತ್ನಿ, ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.
- Thursday
- November 21st, 2024