
ರೂ.50 ಲಕ್ಷ ಅನುದಾನದಲ್ಲಿ ಅಭಿವೃದ್ಧಿಗೊಳ್ಳಲಿರುವ ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ ಜಟ್ಟಿಪಳ್ಳ-ಕೊಡಿಯಾಲಬೈಲು-ದುಗ್ಗಲಡ್ಕ ರಸ್ತೆ ಕಾಮಗಾರಿಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರರವರು ಗುದ್ದಲಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ, ಪ್ರಧಾನ ಕಾರ್ಯದರ್ಶಿ ಸುಬೋಧ್ ಶೆಟ್ಟಿ ಮೇನಾಲ, ಸುಳ್ಯ ನಗರ ಪಂಚಾಯತ್ ಅಧ್ಯಕ್ಷರಾದ ವಿನಯ್ ಕುಮಾರ್ ಕಂದಡ್ಕ, ಉಪಾಧ್ಯಕ್ಷೆ ಸರೋಜಿನಿ ಪೆಲ್ತಡ್ಕ, ನಗರ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶೀಲಾ ಕುರುಂಜಿ,ಸದಸ್ಯರಾದ ಶಶಿಕಲಾ ನೀರಬಿದಿರೆ, ಬುಧ ನಾಯ್ಕ,ಸುಧಾಕರ್ ಕುರುಂಜಿ ಭಾಗ್,ಸುಳ್ಯ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಕೇರ್ಪಳ,ನಗರ ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಜಿನ್ನಪ್ಪ ಪೂಜಾರಿ, ನಗರ ಪಂಚಾಯತ್ ನಾಮನಿರ್ದೇಶಿತ ಸದಸ್ಯರಾದ ಬೂಡು ರಾಧಾಕೃಷ್ಣರೈ ,ಉಬರಡ್ಕ ಗ್ರಾ.ಪಂ. ಉಪಾಧ್ಯಕ್ಷರಾದ ಪ್ರಶಾಂತ್ ಪಾನತ್ತಿಲ, ಹರಿಪ್ರಸಾದ್ ಪಾನತ್ತಿಲ,ಚಂದ್ರಶೇಖರ ನೆಡಿಲ್,ಮತ್ತಿತರರು ಉಪಸ್ಥಿತರಿದ್ದರು.