Ad Widget

ಸುಳ್ಯ ತಾಲೂಕು ಮಟ್ಟದ ಶಿಕ್ಷಕರ‌ ದಿನಾಚರಣೆ ಕಾರ್ಯಕ್ರಮ

ಸುಳ್ಯ, ಸೆ.5: ಹಿರಿಯರ ಆದರ್ಶಗಳೇ ನಮಗೆ ದಾರಿದೀಪ. ದಿನದ ಮಹತ್ವವನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಸಾರ್ಥಕತೆ ಸಾಧ್ಯ. ನಾವು ನಡೆದು ಬಂದ ದಾರಿಯನ್ನು ಸದಾ ನೆನಪಿಟ್ಟುಕೊಳ್ಳುವಂತೆ, ವಿದ್ಯೆ-ಬುದ್ಧಿ ಕಲಿಸಿದ ಗುರು ಹಿರಿಯರನ್ನು ಎಂದಿಗೂ ಮರೆಯಬಾರದು ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಹೇಳಿದರು.

. . . . . . .

ಬೆಳ್ಳಾರೆ ಕೆಪಿಎಸ್ ವಿದ್ಯಾಸಂಸ್ಥೆಯಲ್ಲಿ ನಡೆದ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆಯನ್ನು ಅವರು ಉದ್ಘಾಟಿಸಿದರು. ಒಬ್ಬ ವ್ಯಕ್ತಿ ತನ್ನ ವ್ಯಕ್ತಿತ್ವವನ್ನು ರೂಪಿಸಲು ಶಿಕ್ಷಣ ಪ್ರಾಮುಖ್ಯತೆ ವಹಿಸಿದೆ. ಅದನ್ನು ಕಲಿಸುವ ಗುರು ನಮಗೆಲ್ಲ ಶ್ರೇಷ್ಠರಾಗುತ್ತಾರೆ. ಶಿಕ್ಷಕ ಎಂದಿಗೂ ಶಿಕ್ಷಕನೇ ಆಗುತ್ತಾನೆ. ಆತ ಎಲ್ಲೇ ಹೋದರೂ ತನ್ನ ಗೌರವವನ್ನು ಗುರುವಿನ ಸ್ಥಾನದಲ್ಲಿ ಪಡೆಯುತ್ತಾನೆ. ಮೈಸೂರು ವಿವಿ ಸಂದರ್ಶಕ ಪ್ರಾಧ್ಯಾಪಕ ಡಾ.ಸಿ. ನಾಗಣ್ಣ ಉಪನ್ಯಾಸ ನೀಡುತ್ತಾ ಮಾತನಾಡಿ, ಎಲ್ಲರೂ ಉನ್ನತ ಹುದ್ದೆಗೇರಲು ಅವರಿಗೆ ಶಿಕ್ಷಣ ನೀಡಿದ ಶಿಕ್ಷಕರೇ ಮೂಲ ಕಾರಣ. ಅಂತಹ ಶಿಕ್ಷಕ ವೃತ್ತಿ ಶ್ರೇಷ್ಠವಾದುದು. ನಮ್ಮ ಶಿಕ್ಷಕ ವೃತ್ತಿಯ ಬಗ್ಗೆ ಗೌರವವಿರಲಿ ಎಂದರು.

ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ ಪನ್ನೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ತೀರ್ಥರಾಮ ಇ.ವಿ., ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ, ಸುಳ್ಯ ತಾಲೂಕು ತಹಶೀಲ್ದಾರ್ ಅನಿತಾಲಕ್ಷ್ಮೀ, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್ ಎನ್., ಕೆಪಿಎಸ್ ವಿದ್ಯಾ ಸಂಸ್ಥೆಯ ಪ್ರಾಂಶುಪಾಲ ವಿಶ್ವನಾಥ ಗೌಡ, ಉಪಪ್ರಾಂಶುಪಾಲೆ ಉಮಾಕುಮಾರಿ, ಹುಣಸೂರು ದೀಕ್ಷಾ ಎ. , ಅಕ್ಷರದಾಸೋಹ ಸಹಾಯಕ ನಿರ್ದೇಶಕಿವೀಣಾ ಎಂ.ಟಿ., ಕ್ಷೇತ್ರ ಸಮನ್ವಯಾಧಿಕಾರಿ ಶೀತಲ್, ಸರಕಾರಿ ನೌಕರರ ಸಂಘದ ತಾಲೂಕು ಘಟಕದ ಅಧ್ಯಕ್ಷ ತೀರ್ಥರಾಮ ಹೊಸೊಳಿಕೆ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶ್ರೀಧರ ಗೌಡ ಕೆರೆಮೂಲೆ, ಶಿಕ್ಷಕರ ಸಂಘದ ಅಧ್ಯಕ್ಷ ಚಂದ್ರಶೇಖರ ಕೆ.ಎಸ್., ಬೋಧಕೇತರ ನೌಕರರ ಸಂಘದ ಅಧ್ಯಕ್ಷ ಶಿವಪ್ರಸಾದ್, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸೂಫಿರಾಜೆ, ಪ್ರಾಂಶುಪಾಲ – ಮುಖ್ಯೋಪಾಧ್ಯಾಯ ರ ಸಂಘದ ಕಾರ್ಯದರ್ಶಿ ಪ್ರಕಾಶ ಮೂಡಿತ್ತಾಯ ಭಾಗವಹಿಸಿದ್ದರು.

ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ. ಮಹಾದೇವ ಸ್ವಾಗತಿಸಿದರು. ಮಮತಾ ಮೂಡಿತ್ತಾಯ ಸಂಕೇತ.ಮಮತಾ ಜಯನಗರ ಕಾರ್ಯಕ್ರಮ ನಿರೂಪಿಸಿದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!