ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಸುಳ್ಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಗ್ರಾಮ ಪಂಚಾಯತಿ ಮಡಪ್ಪಾಡಿ ಇವರುಗಳ ಸಹಭಾಗಿತ್ವದಲ್ಲಿ “ಬೇಟಿ ಬಚಾವೋ ಬೇಟಿ ಪಡಾವೋ ” ಯೋಜನೆಯ ಅಡಿಯಲ್ಲಿ ಸೆ.09 ರಂದು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಿತ್ರದೇವ ಮಡಪ್ಪಾಡಿ ಇವರ ಅಧ್ಯಕ್ಷತೆಯಲ್ಲಿ ಪಂಚಾಯತ್ ಸಭಾಂಗಣದಲ್ಲಿ “ಆರೋಗ್ಯವಂತ ಹೆಣ್ಣು ಶಿಶು ಪ್ರದರ್ಶನ ” ಮತ್ತು “ಪೋಷಣ್ ಮಾಸಾಚರಣೆ ” ಅಂಗವಾಗಿ “ಆಟದೊಂದಿಗೆ ಪಾಠ” ಇದರ ಬಗ್ಗೆ ಅರಿವು ಕಾರ್ಯಕ್ರಮ ಮತ್ತು ಪ್ರಾತ್ಯಕ್ಷಿತೆಯನ್ನು ನಡೆಸಲಾಯಿತು.
ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಉಷಾ ಜಯರಾಮ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಗ್ರಾಮ ಪಂಚಾಯತ್ ಸದಸ್ಯರಾದ ಜಯರಾಮ ಹಾಡಿಕಲ್ಲು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರವೀಣ್ ಕುಮಾರ್, ಎಲ್.ಹೆಚ್.ವಿ. ಹೇಮಲತ, ಸಿ ಹೆವ್ ಒ ಪ್ರಜ್ವಲ್, ಶಿಕ್ಷಕ ರಂಜಿತ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಆಟದೊಂದಿಗೆ ಪಾಠದ ಬಗ್ಗೆ ಪ್ರಾತ್ಯಕ್ಷಿಕೆ ಮಾಡಿ ಮಾಹಿತಿ ನೀಡಿದರು.ಐಸಿಡಿಎಸ್ ನ ವಲಯ ಮೇಲ್ವಿಚಾರಕರಾದ ಶ್ರೀಮತಿ ವಿಜಯರವರು ವಿಷಯ ಪ್ರಾಸ್ತಾವಿಸಿ ಕಾರ್ಯಕ್ರಮ ನಿರೂಪಣೆ ಮಾಡಿದರು. ಕಾರ್ಯಕರ್ತೆ ವಿಮಲ ಸ್ವಾಗತಿಸಿ, ತಾರ ವಂದಿಸಿದರು. ಆಶಾ ಕಾರ್ಯಕರ್ತೆಯರು, ಸ್ತ್ರೀ ಶಕ್ತಿ ಸದಸ್ಯರು ತಾಯಂದಿರು ಪುಟಾಣಿ ಮಕ್ಕಳೊಂದಿಗೆ ಉಪಸ್ಥಿತರಿದ್ದು ಆರೋಗ್ಯವಂತ ಮಕ್ಕಳನ್ನು ಗುರುತಿಸಿ ಗೌರವಿಸಲಾಯಿತು. ಪಂಚಾಯತಿ ಸಿಬ್ಬಂದಿ ಯರಾದ ಪುಷ್ಪಲತ ನಾಗವೇಣಿ, ತನುರಾಜ್, ನವ್ಯ ರವರು ಕಾರ್ಯಕ್ರಮಕ್ಕೆ ಸಹಕರಿಸಿದರು.