Ad Widget

ನಡುಗಲ್ಲು :- ಶ್ರೀ ದುರ್ಗಾ ಮಹಿಳಾ ಭಜನಾ ಮಂಡಳಿ ಉದ್ಘಾಟನೆ

. . . . . . . . .

. . . . . . .

ಮರಕತ ನಡುಗಲ್ಲುವಿನ ಶ್ರೀ ದುರ್ಗಾ ಮಹಿಳಾ ಭಜನಾ ಮಂಡಳಿಯು ಸೆ.09 ರಂದು ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ಉದ್ಘಾಟನೆಗೊಂಡಿತು.

ದುರ್ಗಾಪರಮೇಶ್ವರಿ ಅಮ್ಮನವರಿಗೆ ಹೂವಿನ ಪೂಜೆ ನೆರವೇರಿಸಿ ಪ್ರಾರ್ಥಿಸಿ ಪ್ರಸಾದ ಪಡೆದು ಶ್ರೀ ದುರ್ಗಾ ಭಜನಾ ಮಂಡಳಿ ಮರಕತ ನಡುಗಲ್ಲು ಇದರ ಅಧ್ಯಕ್ಷರಾದ ಸುಬ್ರಹ್ಮಣ್ಯ ಪಾಲ್ತಾಡು ಅವರು ಮಹಿಳಾ ಭಜನಾ ಮಂಡಳಿಯನ್ನು ಉದ್ಘಾಟಿಸಿದರು. ನಂತರ ಭಜನಾ ಕಾರ್ಯಕ್ರಮ ನಡೆಯಿತು. ನಂತರ ಭಜನಾ ಮಂಡಳಿಯ ಅಧ್ಯಕ್ಷ/ಕಾರ್ಯದರ್ಶಿ ಆಯ್ಕೆ ನಡೆದು ಅಧ್ಯಕ್ಷರಾಗಿ ಶ್ರೀಮತಿ ಲೀಲಾವತಿ ಅಂಜೇರಿ, ಕಾರ್ಯದರ್ಶಿಯಾಗಿ ಶ್ರೀಮತಿ ಧನ್ಯ ನಡುಗಲ್ಲು, ಖಜಾಂಜಿಯಾಗಿ ಶ್ರೀಮತಿ ಚಂದ್ರಾವತಿ ಉತ್ರಂಬೆ ಇವರುಗಳನ್ನು ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮಹಿಳಾ ಭಜನಾ ಮಂಡಳಿಯ ಸದಸ್ಯರು, ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಚಂದ್ರಶೇಖರ ಮಾವಿನಕಟ್ಟೆ, ದಯಾನಂದ ಹುದೇರಿ, ಪ್ರಶಾಂತ್ ಅಂಬೆಕಲ್ಲು, ಹರೀಶ್ ಅಂಜೇರಿ ಇವರುಗಳು ಉಪಸ್ಥಿತರಿದ್ದರು

ವರದಿ :- ಉಲ್ಲಾಸ್ ಕಜ್ಜೋಡಿ


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading