ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ ಸೆ.10ರಂದು ಓಣಂ ಹಬ್ಬವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮವನ್ನು ಪ್ರಾಂಶುಪಾಲ ಅರುಣ್ ಕುಮಾರ್ ದೀಪ ಪ್ರಜ್ವಲಿಸಿ ಓಣಂ ಆಚರಣೆಯ ಮಹತ್ವವನ್ನು ತಿಳಿಸಿದರು. 9ನೇ ತರಗತಿಯ ವಿದ್ಯಾರ್ಥಿನಿಯರ ತಿರುವಾದ್ದಿರಾ ನೃತ್ಯವು ಕಾರ್ಯಕ್ರಮಕ್ಕೆ ಮೆರುಗನ್ನು ನೀಡಿತು.
ಕೆವಿಜಿ ಪ್ಲೇಹೋಂ ನಿಂದ ಹತ್ತನೇ ತರಗತಿವರೆಗಿನ ಎಲ್ಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕ ಶಿಕ್ಷಕೇತರ ವೃಂದದವರು ಸಾಂಪ್ರದಾಯಿಕ ಉಡುಗೆಗಳನ್ನು ತೊಟ್ಟು, ಪೂಕಳಂ ಹಾಕಿ ಓಣಂ ವಾತಾವರಣವನ್ನು ಸೃಷ್ಟಿಸಿದರು . ಶಾಲಾ ಆಡಳಿತ ಮಂಡಳಿಯ ಸಂಚಾಲಕ ಡಾ. ರೇಣುಕಾಪ್ರಸಾದ್ ಕೆ.ವಿ, ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್ ಊರುಬೈಲು ಮಾತನಾಡಿ ಶುಭಹಾರೈಸಿದರು.
ಕಾರ್ಯಕ್ರಮವನ್ನು 9ನೇ ತರಗತಿಯ ಮನ್ವಿತ್ ಮತ್ತು ಅನ್ವಿತಾ ನಿರೂಪಿಸಿದರು.