
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಕೊಲ್ಲಮೊಗ್ರ, ಎಲಿಮಲೆ ಉಪಕೇಂದ್ರ ವತಿಯಿಂದ ಸೆ.12 ರಂದುಆಂಗ್ಲ ಮಾಧ್ಯಮ ಜ್ಞಾನ ದೀಪ ವಿದ್ಯಾಸಂಸ್ಥೆಯಲ್ಲಿ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ ಕಾರ್ಯಕ್ರಮ ನಡೆಯಿತು. ಸಮದಾಯ ಆರೋಗ್ಯ ಅಧಿಕಾರಿ ಕು.ಮೋನಿಷಾ ಇವರಿಂದ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಶಾಲಾ ಮುಖ್ಯ ಶಿಕ್ಷಕರಾದ ಗದಾಧರ ಬಾಳುಗೋಡು, ಶಿಕ್ಷಕ- ಶಿಕ್ಷಕೇತರ ಸಿಬ್ಬಂದಿ ವರ್ಗದವರು ಆಶಾ ಕಾರ್ಯಕರ್ತೆಯರಾದ ಶ್ರೀಮತಿ ನಿರ್ಮಲ , ಶಾಲಾ ಮಕ್ಕಳು ಉಪಸ್ಥಿತರಿದ್ದರು.