ಗ್ರಾಮೀಣ ನೀರು ಮತ್ತು ನೈರ್ಮಲ್ಯ ಇಲಾಖೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮತ್ತು ಅನುಷ್ಠಾನ ಬೆಂಬಲ ಸಂಸ್ಥೆ ಗ್ರಾಮ್ಸ್ ಮಂಗಳೂರು ಇವರುಗಳ ಸಹಯೋಗದಲ್ಲಿ ಸುಳ್ಯ ತಾಲೂಕಿನ ಕೊಲ್ಲಮೊಗ್ರ ಗ್ರಾಮ ಪಂಚಾಯತ್ ಆವರಣದಲ್ಲಿ ಗ್ರಾಮ ನೈರ್ಮಲ್ಯ ಯೋಜನೆಯನ್ನು ಗ್ರಾಮೀಣ ಸಹಭಾಗಿತ್ವ ಸಮೀಕ್ಷೆಯ ಮೂಲಕ ನಡೆಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಜಯಶ್ರೀ ಚಾಂತಾಳ,ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವಿಚಂದ್ರ.ಎ, ಗ್ರಾಮ ಪಂಚಾಯತ್ ಸದಸ್ಯರು, ಅಶಾ ಕಾರ್ಯಕರ್ತೆಯರು, ಸಂಜೀವಿನಿ ಸಂಘದ ಪದಾಧಿಕಾರಿಗಳು, ಗ್ರಾಮಸ್ಥರು ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು. ಗ್ರಾಮ್ಸ್ ಸಂಸ್ಥೆಯ ಸಿಬ್ಬಂದಿಯಾದ ಅಭಿಲಾಷ್.ಕೆ.ಎಲ್ ಅವರು ಕಾರ್ಯಕ್ರಮಕ್ಕೆ ಸಹಕರಿಸಿದರು.
ವರದಿ :- ಉಲ್ಲಾಸ್ ಕಜ್ಜೋಡಿ