ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ದರ್ಖಾಸ್ತು ಇಲ್ಲಿಯ ವಿದ್ಯಾರ್ಥಿಗಳಿಗೆ ಬೆಳ್ಳಾರೆ ಮುತ್ತೂಟ್ ಮಿನಿ ಫೈನಾನ್ಸಿಯರ್ಸ್ ಲಿಮಿಟೆಡ್ ಇದರ ವತಿಯಿಂದ ಉಚಿತ ಶಾಲಾ ಬ್ಯಾಗ್ ವಿತರಿಸುವ “ಬ್ಯಾಗ್ ಆಫ್ ಜಾಯ್” ಕಾರ್ಯಕ್ರಮ ಸೆ.14 ರಂದು ಜರಗಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ದಿ ಸಮಿತಿಯ ಅಧ್ಯಕ್ಷರಾದ ಹರೀಶ್ ರವರು ವಹಿಸಿದ್ದರು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚಂದ್ರಶೇಖರ್ ಪನ್ನೆಯವರು ಕಾರ್ಯಕ್ರಮ ಉದ್ಘಾಟಿಸಿ ಶುಭಹಾರೈಸಿದರು.
ಮುತ್ತೂಟ್ ಮಿನಿ ಫೈನಾನ್ಸಿಯರ್ಸ್ ಲಿಮಿಟೆಡ್ ಬೆಂಗಳೂರು ಇದರ ರಿಜಿನಲ್ ಮ್ಯಾನೇಜರ್ ಗುರು ಕೆ.ಎಚ್ ಇವರು ಪ್ರಾಸ್ತಾವಿಕ ನುಡಿಗಳೊಂದಿಗೆ ಸಂಸ್ಥೆಯ ಸಾಮಾಜಿಕ ಜವಾಬ್ದಾರಿಯ ಅಂಗವಾಗಿ ಸರಕಾರಿ ಶಾಲಾ ಮಕ್ಕಳಿಗೆ ಪ್ರೋತ್ಸಾಹದಾಯಕವಾಗಿ ಸಂಸ್ಥೆಯ ವತಿಯಿಂದ ಶಾಲಾ ಬ್ಯಾಗ್ ಗಳನ್ನು ವಿತರಿಸಲಾಗುತ್ತಿದೆ ಎಂದು ಹೇಳಿದರು.
ಸರ್ಕಾರಿ ಶಾಲೆಗಳು ಉತ್ತಮ ಶಿಕ್ಷಣ ನೀಡುವುದರೊಂದಿಗೆ ಮಕ್ಕಳಲ್ಲಿ ಉತ್ತಮ ಸಂಸ್ಕಾರವನ್ನು ಬೆಳೆಸುತ್ತಿದೆ ಎಂದು ಶ್ಲಾಘಿಸಿದರು. ಶಾಲಾ ಸಂಚಾಲನಾ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ರಾಜೀವಿ ಆರ್ ರೈ ಅವರು ಸಂಸ್ಥೆಯ ಕಾರ್ಯಕ್ರಮವನ್ನು ಶ್ಲಾಘಿಸಿ, ಸರ್ಕಾರಿ ಶಾಲಾ ಅಭಿವೃದ್ಧಿಯಲ್ಲಿ ಸ್ಥಳೀಯ ಸಂಸ್ಥೆಗಳ ಮತ್ತು ದಾನಿಗಳ ಸಹಕಾರ ಅಗತ್ಯ ಎಂದರು.
ಗ್ರಾಮ ಪಂಚಾಯಿತಿ ಸದಸ್ಯರಾದ ಅನಿಲ್ ರೈ ಪುಡ್ಕಜೆ ಹಾಗೂ ಮಣಿಕಂಠ ಹಾಗೂ ಬಿ.ಸಿ.ರೋಡ್ ಶಾಖೆಯ ಸೀನಿಯರ್ ಮ್ಯಾನೇಜರ್ ಅಭಿಜಿತ್, ಬೆಳ್ಳಾರೆ ಶಾಖೆಯ ದೀಪಕ್.ಆರ್.ಕೆ, ಕವಿತಾ.ಜೆ.ಹೆಚ್, ರಮಿತಾ ಪೂಂಜಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪಲ್ಲವಿ.ಪಿ ಸ್ವಾಗತಿಸಿದರು, ಬೆಳ್ಳಾರೆ ಶಾಖೆಯ ಕವಿತಾ ವಂದನಾರ್ಪಣೆಗೈದರು, ಶ್ರೀಮತಿ ಪ್ರೇಮ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಶಿಕ್ಷಕ ವೃಂದ, ಮಕ್ಕಳು, ಪೋಷಕರು ಮತ್ತು ಊರವರು ಉಪಸ್ಥಿತರಿದ್ದರು.