ಕಲ್ಮಡ್ಕ:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಸುಳ್ಯ, ಸಪ್ತಶ್ರೀ ಗೊಂಚಲು ಸಮಿತಿ ಕಲ್ಮಡ್ಕ, ಗ್ರಾಮ ಪಂಚಾಯತ್ ಕಲ್ಮಡ್ಕ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಹಯೋಗದಲ್ಲಿ ಪೌಷ್ಟಿಕ ಆಹಾರ ಸಪ್ತಾಹ ರಾಷ್ಟ್ರೀಯ ಪೋಷಣ್ ಮಾಸಾಚರಣೆ ಮಾತೃವಂದನ ಸಪ್ತಾಹ, ಹೆಣ್ಣು ಶಿಶು ಪ್ರದರ್ಶನ ಪಡ್ಪಿನಂಗಡಿ ಶಿವ ಗೌರಿ ಕಲಾಮಂದಿರದಲ್ಲಿ ಜರುಗಿಸಲಾಯಿತ್ತು.
ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಹಾಜೀರಾ ಗಫೂರ್ ಇವರು ದೀಪ ಬೆಳಗಿಸಿ ಉದ್ಘಾಟಿಸಿದರು.
ಸಂಪನ್ಮೂಲ ವ್ಯಕ್ತಿಯಾಗಿ ಶ್ರೀಮತಿ ಪ್ರಮಿಳಾ ಇವರ ಆರೋಗ್ಯ ಮತ್ತು ಪೌಷ್ಟಿಕಾಂಶದ ಬಗ್ಗೆ ಮಾಹಿತಿ ಲಭ್ಯವಾಗಿದೆ. ಜಿಲ್ಲಾ ಜಲಜೀವನ್ ಮಿಷನ್ ಯೋಜನೆ ಜಿಲ್ಲಾ ಕಾರ್ಪೊರೇಟರ್ ಸುರೇಶ್ ಇವರು ಸ್ವಚ್ಛತೆ ಮತ್ತು ನೀರು ಇಂಗಿಸುವ ಬಗ್ಗೆ ಮಾಹಿತಿ ನೀಡಲಾಗಿದೆ. ಮಳೆ ಕೊಯ್ಯಿಲಿನ ಬಗ್ಗೆ ಗ್ರಾಮ ಪಂಚಾಯತ್ ಕಾರ್ಯದರ್ಶಿ ಶ್ರೀಯುತ ಗೋಪಾಲಕೃಷ್ಣ ಮಾಹಿತಿ ನೀಡಿದ್ದಾರೆ. ಪಂಚಾಯತ್ ಸದಸ್ಯರಾದ ಶ್ರೀಯುತ ಲೋಕೇಶ್ ಆಕ್ರಿಕಟ್ಟೆ ಸಭೆಯನ್ನು ಉದ್ದೇಶಿಸಿ. ಪಡ್ಪಿನಂಗಡಿ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಧರ್ಮವತಿ ಇವರು ಹೆಣ್ಣು ಮಕ್ಕಳ ಶಿಕ್ಷಣದ ಬಗ್ಗೆ. ಪೌಷ್ಟಿಕ ಆಹಾರ ಸಪ್ತಾಹದ ಅಂಗವಾಗಿ ಸ್ತ್ರೀ ಶಕ್ತಿ ಸಂಘದ ಸದಸ್ಯರು ವಿವಿಧ ಪೌಷ್ಟಿಕ ಆಹಾರಗಳು ಹಾಗೂ ಸ್ಥಳೀಯವಾಗಿ ವಿವಿಧ ತಿನಿಸುಗಳನ್ನು ತಯಾರಿಸಿದ್ದರು ಪೌಷ್ಟಿಕ ಆಹಾರಗಳ ಸ್ಪರ್ಧೆಯಲ್ಲಿ ಬಹುಮಾನ ವಿತರಿಸಲಾಯಿತು.
ಹೆಣ್ಣು ಮಗುವಿನ ಪ್ರದರ್ಶನ ಮತ್ತು ಬಹುಮಾನ ವಿತರಣೆ. ಗರ್ಭಿಣಿ ಮಹಿಳೆಗೆ ಸೀಮಂತ ಕಾರ್ಯಕ್ರಮ ಮತ್ತು ಮಾತೃವಂದನ ಅರ್ಜಿಯನ್ನು ಸ್ವೀಕರಿಸಲಾಯಿತು. ಪಂಚಾಯತ್ ಸದಸ್ಯರಾದ ಶ್ರೀಮತಿ ಪವಿತ್ರ ಕುದ್ವ ಮತ್ತು ಶ್ರೀಮತಿ ಮೀನಾಕ್ಷಿ ಕಲ್ಮಡ್ಕ ಇವರು ವೇದಿಕೆಯಲ್ಲಿ ಉಪಸ್ಥಿತರಿದ್ದಾರೆ. ನಿವೃತ್ತ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀಮತಿ ಸರಸ್ವತಿ ನಾಗೇಶ್ ಇವರ ಯೋಗದ ಬಗ್ಗೆ ಮಾಹಿತಿ ಲಭ್ಯ. ಸಪ್ತಶ್ರೀ ಗೊಂಚಲು ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಶಾರದ ರವರು ಸಭಾಧ್ಯಕ್ಷತೆಯನ್ನು ವಹಿಸಿದ್ದರು. ಪಂಜ ವಲಯದ ಅಂಗನವಾಡಿ ಮೇಲ್ವಿಚಾರಕಿ ಶ್ರೀಮತಿ ರವಿಶ್ರೀ.ಕೆ ಪ್ರಾಸ್ತಾವಿಕವಾಗಿ ಮಾತನಾಡಿದರು.
ಶ್ರೀಮತಿ ದೇವಿಕಾ ಕಲ್ಮಡ್ಕ ಪ್ರಾರ್ಥಿಸಿ, ಗೊಂಚಲಿನ ಮಾಜಿ ಅಧ್ಯಕ್ಷರಾದ ಶ್ರೀಮತಿ ಮಮತಾ ನಡ್ಕ ಸ್ವಾಗತಿಸಿದರು.
ಗೊಂಚಲಿನ ಕಾರ್ಯದರ್ಶಿ ಶ್ರೀಮತಿ ಅನಿತಾ ವಂದಿಸಿ, ನಿವೃತ್ತ ಶಿಕ್ಷಕಿ ಶ್ರೀಮತಿ ಕಮಲ ನಡ್ಕ ಇವರು ಕಾರ್ಯಕ್ರಮ ನಿರೂಪಿಸಿದರು.
ಈ ಸಂದರ್ಭದಲ್ಲಿ ಶ್ರೀಯುತ ಸುರೇಶ್ ನಡ್ಕ, ಆರೋಗ್ಯ ಸುರಕ್ಷಾಧಿಕಾರಿಗಳು ಶ್ರೀಮತಿ ಪವಿತ್ರ, ಸಮುದಾಯ ಆರೋಗ್ಯ ಅಧಿಕಾರಿ ಕುಮಾರಿ ಅಶ್ವಿನಿ, ಆಶಾ ಕಾರ್ಯಕರ್ತೆ, ಅಂಗನವಾಡಿ ಕಾರ್ಯಕರ್ತೆಯರು ಮತ್ತು ನಿವೃತ್ತ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ನೇತ್ರಾವತಿ ಅಡ್ಕಾರ್, ಸ್ತ್ರೀಶಕ್ತಿ ಸದಸ್ಯರು, ಮಕ್ಕಳ ತಾಯಂದಿರು ಹಾಜರಿದ್ದು ಸಹಕರಿಸಿದರು.