- Thursday
- November 21st, 2024
ಕಡಂಬಳ ಸೇತುವೆ ಕಾಮಗಾರಿಗೆ ಸಚಿವರಾದ ಎಸ್.ಅಂಗಾರ ಅವರ ಸೂಚನೆಯಂತೆ ಸುಳ್ಯ ಬಿ.ಜೆ.ಪಿ ಮಂಡಲಾಧ್ಯಕ್ಷರಾದ ಹರೀಶ್ ಕಂಜಿಪಿಲಿ ಅವರ ನಿರ್ದೇಶನದಂತೆ ಸೆ.22 ರಂದು ಪ್ರಾರಂಭಗೊಂಡಿದೆ. ಯಾವ ಸಮಯದಲ್ಲಿ ಜನರ ಕಷ್ಟಗಳಿಗೆ ಸ್ಪಂದಿಸಬೇಕೋ ಅಂತಹ ಸಮಯದಲ್ಲಿ ನಮ್ಮ ಸಚಿವರು ನಾಯಕರುಗಳು ಸ್ಪಂದಿಸಿದ್ದಾರೆ. ಭೀಕರ ಮಳೆಯಿಂದ ಕೊಚ್ಚಿ ಹೋದ ನಮ್ಮ ಗ್ರಾಮದ ನಾಲ್ಕು ಸೇತುವೆಗಳನ್ನು ಎಂಟು ದಿನಗಳಲ್ಲಿ ನಮ್ಮ ಸಚಿವರು,...
ಹರಿಹರ ಪಲ್ಲತ್ತಡ್ಕ ದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗ ದಲ್ಲಿ ಪೋಷಣ್ ಅಭಿಯಾನ ಯೋಜನೆಯಡಿ ಪೋಷಣ್ ಮಾಸಚರಣೆಯ ಪೌಷ್ಟಿಕ ಆಹಾರ ಸಪ್ತಾಹ ಹಾಗೂ ಅಮೃತ ಗೊಂಚಲು ಸಭೆ ಕಾರ್ಯಕ್ರಮ ಸೆ.21 ರಂದು ಹರಿಹರೇಶ್ವರ ದೇವಸ್ಥಾನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಶ್ರೀಮತಿ ತಾರಾಮಲ್ಲಾರ ಉದ್ಘಾಟಿಸಿದರು. ಶ್ರೀಮತಿ ಹರ್ಷಿಣಿಯವರು ಅಧ್ಯಕ್ಷತೆ ವಹಿಸಿದರು. ಪ್ರಾಥಮಿಕ ಆರೋಗ್ಯ ಕೇಂದ್ರ ಸುಬ್ರಹ್ಮಣ್ಯ...
ಕನಕಮಜಲು ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಮಾಸಾಚರಣೆ ಕಾರ್ಯಕ್ರಮವು ಸೆ.21ರಂದು ಜರುಗಿತು. ವೇದಿಕೆಯಲ್ಲಿ ಅಂಗನವಾಡಿ ಬಾಲವಿಕಾಸ ಸಮಿತಿಯ ಸದಸ್ಯ ಅಬ್ದುಲ್ ಮಜೀದ್, ಗ್ರಾ.ಪಂ. ಸದಸ್ಯ ಇಬ್ರಾಹಿಂ ಕಾಸಿಂ ಕನಕಮಜಲು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಅಂಗನವಾಡಿ ಪುಟಾಣಿಗಳಿಂದ ಪೋಷಣ್ ಮಾಸಾಚರಣೆ ಬಗ್ಗೆ ಪೋಷಣೆ ಮಾಡಿಸಲಾಯಿತು. ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ವನಜ ಸ್ವಾಗತಿಸಿ, ವಂದಿಸಿದರು. ಅಂಗನವಾಡಿ ಸಹಾಯಕಿ ಶ್ರೀಮತಿ ಜಯಂತಿ...
ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ವತಿಯಿಂದ ಸೆ.22 ರಂದು ಹರಿಹರ ಪಲ್ಲತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಛತಾ ಹೀ ಸೇವಾ ಪ್ರತಿಜ್ಞಾವಿಧಿ ಬೋಧನೆ ನಡೆಯಿತು. ಈ ಸಂದರ್ಭದಲ್ಲಿ ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಮಣಿಯಾನ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ನೇಮಿಚಂದ್ರ ದೋಣಿಪಳ್ಳ, ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ದೇವಕಿ ನೆತ್ತಾರ, ಸಹಶಿಕ್ಷಕರುಗಳು...
ರೋಟರಿ ಕ್ಲಬ್ ಸುಳ್ಯ ವತಿಯಿಂದ ವನವಾಸಿ ವಸತಿ ಗೃಹ ಅಡ್ಕಾರು ಇಲ್ಲಿಗೆ 25 ಫೈಬರ್ ಚಯರ್ ಗಳನ್ನು ರೋಟರಿ ಜಿಲ್ಲಾ ಗವರ್ನರ್ ಪ್ರಕಾಶ್ ಕಾರಂತ್ ಇವರು ವಿತರಿಸಿ ಸಮಾಜದ ಕಟ್ಟ ಕಡೆಯ ವಿದ್ಯಾರ್ಥಿಗಳಿಗೂ ಗುಣಮಟ್ಟದ ಶಿಕ್ಷಣ ದೊರೆಯಲು ರೋಟರಿ ವಿದ್ಯಾಸಿರಿ ಯೋಜನೆಯ ಮೂಲಕ ಹಲವಾರು ಕೊಡುಗೆಗಳನ್ನು ನೀಡಲು ಪ್ರಾಮಾಣಿಕ ಪ್ರಯತ್ನ ನಡೆಸುತ್ತಿದೆ ಎಂದು ನುಡಿದರು. ಇದರ...
ಸುಳ್ಯ ಕೆ. ವಿ. ಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಹೆರಿಗೆ ಮತ್ತು ಸ್ತ್ರೀ ರೋಗ ವಿಭಾಗದ ವೈದ್ಯ ರೊ. ದಾ. ರವಿಕಾಂತ್ ಇವರು ಮುಂದುವರಿದ ತಂತ್ರಜ್ಞಾನದ ಶಸ್ತ್ರ ಚಿಕಿತ್ಸೆ ಲೆಪ್ರೋಸ್ಕೋಪಿಕ್ ಶಸ್ತ್ರ ಚಿಕಿತ್ಸೆ ಕುರಿತು ಮಾಹಿತಿ ನೀಡಿ ಜನಸಾಮಾನ್ಯರಲ್ಲಿರುವ ತಪ್ಪು ತಿಳುವಳಿಕೆಯನ್ನು ಹೋಗಲಾಡಿಸಿ ನಿರ್ಭೀತಿಯಿಂದ ಇದರ ಸದುಪಯೋಗವನ್ನು ಪಡೆಯುವಂತಾಗಬೇಕು ಎಂಬ ಸದಾಶಯವನ್ನು ವ್ಯಕ್ತಪಡಿಸಿದರು. ರೊ....
ಸುಳ್ಯ ಶ್ರೀ ರಾಂ ಪೇಟೆಯ ಶ್ರೀ ರಾಮ ಭಜನಾ ಮಂದಿರದಲ್ಲಿ ನಡೆಯಲಿರುವ ಒಂದು ತಿಂಗಳ ಸಂಧ್ಯಾ ಕಾಲದ ಭಜನಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯ ಬಿಡುಗಡೆ ಸೆ.22 ರಂದು ಮಂದಿರದಲ್ಲಿ ನಡೆಯಿತು. ಆಮಂತ್ರಣ ಪತ್ರಿಕೆಯನ್ನು ಬ್ರಹ್ಮಶ್ರೀವೇದಮೂರ್ತಿ ಪುರೋಹಿತ ನಾಗರಾಜ್ ಭಟ್ ಬಿಡುಗಡೆಗೊಳಿಸಿದರು. ಮಂದಿರದ ಧರ್ಮದರ್ಶಿ ಮಂಡಳಿಯ ಸದಸ್ಯ ಎಂ.ಬಿ.ಸದಾಶಿವ ರವರು ಪ್ರಸ್ತಾವಿಕವಾಗಿ ಮಾತನಾಡಿದರು.ಈ ಸಂದರ್ಭದಲ್ಲಿ ಸದಸ್ಯರಾದ ಮಹಾಬಲ...
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಸುಳ್ಯ, ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಗ್ರಾಮ ಪಂಚಾಯತ್ ಉಬರಡ್ಕ ಮಿತ್ತೂರು, ನಂದಿನಿ ಮಹಿಳಾ ಮಂಡಲ ಉಬರಡ್ಕ ಮಿತ್ತೂರು, ಪಂಚಮಿ ಸ್ತ್ರೀ ಶಕ್ತಿ ಗೊಂಚಲು ಸಮಿತಿ ಉಬರಡ್ಕ ಮಿತ್ತೂರು ಇದರ ಸಹಯೋಗದೊಂದಿಗೆ ಹೆಣ್ಣು ಮಕ್ಕಳ ಶಿಶು ಪ್ರದರ್ಶನ ಗ್ರಾಮ ಮಟ್ಟದ ಪೌಷ್ಟಿಕ ಆಹಾರ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್, ನಿಂತಿಕಲ್ಲು ವಲಯದ ಎಡಮಂಗಲ ಪ್ರೌಢ ಶಾಲೆಯಲ್ಲಿ ಸೆ. 23ರಂದು ಮಕ್ಕಳಿಗೆ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಹಿರಿಯ ಶಿಕ್ಷಕ ಆನಂದ ಕೆ ಎಸ್ ನೆರವೇರಿಸಿ ಕಾರ್ಯಕ್ರಮದ ಕುರಿತು ಮಾತನಾಡಿದರು. ಈ ಸಂದರ್ಭದಲ್ಲಿ ನಿವೃತ್ತ ಪ್ರಾಂಶುಪಾಲ ಬಾಲಕೃಷ್ಣ ಬೊಳ್ಳುರು ಮಕ್ಕಳಿಗೆ ಮಾಹಿತಿ ಕಾರ್ಯಗಾರವನ್ನು ನಡೆಸಿಕೊಟ್ಟರು....
ಮಡಪ್ಪಾಡಿ ಗ್ರಾಮ ಪಂಚಾಯತ್ 2021-2 2ನೇ ಸಾಲಿನ ಜಮಾಬಂದಿ ಕಾರ್ಯಕ್ರಮವು ಸೆ.22 ರಂದು ಜರುಗಿತು. ಈ ಕಾರ್ಯಕ್ರಮದಲ್ಲಿ ಜಮಾಬಂದಿ ಅಧಿಕಾರಿಯಾಗಿ ಶ್ರೀ ಸುಧಾಕರ ಕೆ ಉಪನಿರ್ದೇಶಕರು(ಆಡಳಿತ) ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮಂಗಳೂರು ಇವರು ಜಮಾಬಂದಿ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀ ಮಿತ್ರದೇವ ಮಡಪ್ಪಾಡಿ, ಉಪಾಧ್ಯಕ್ಷ ಶ್ರೀಮತಿ ಉಷಾ...
Loading posts...
All posts loaded
No more posts