- Saturday
- November 23rd, 2024
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನೂತನ ಅಜ್ಜಾವರ ವಲಯದ ವಲಯ ಸಮಿತಿಯನ್ನು ಅಜ್ಜಾವರ ವಲಯ ಕಚೇರಿಯಲ್ಲಿ ನಡೆದ ಒಕ್ಕೂಟದ ಅಧ್ಯಕ್ಷರುಗಳ ಸಭೆಯಲ್ಲಿ ರಚಿಸಲಾಯಿತು. ಅಜ್ಜಾವರ ವಲಯದ ನೂತನ ಅಧ್ಯಕ್ಷರಾಗಿ ಸುರೇಶ್ ಕಣೆಮರಡ್ಕ, ಕಾರ್ಯದರ್ಶಿ ವಲಯ ಮೇಲ್ವಿಚಾರಕರಾದ ಶ್ರೀಮತಿ ವಿಶಾಲ, ಉಪಾಧ್ಯಕ್ಷರಾಗಿ ಸುಧೀರ್ ಕಾಂತಮಂಗಲ ಕೋಶಾಧಿಕಾರಿಯಾಗಿ ಪ್ರವೀಣ್ ಕುಮಾರ್, ಉದ್ದಂತಡ್ಕ, ಜೊತೆ ಕಾರ್ಯದರ್ಶಿಯಾಗಿ ಶ್ರೀಮತಿ ಹರಿಣಾಕ್ಷಿ ರೈ...
ನೆಲ್ಲೂರು ಕೆಮ್ರಾಜೆ ಗ್ರಾಮ ಪಂಚಾಯತ್, ಸುರತ್ಕಲ್ ನ ಐ ಮಿತ್ರ 2.5 ಎನ್.ವಿ.ಜಿ. ಕೇಂದ್ರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಆಶ್ರಯದಲ್ಲಿ ಸೆ.23 ರಂದು ಕಣ್ಣಿನ ಉಚಿತ ತಪಾಸಣಾ ಶಿಬಿರ ನಡೆಯಿತು. ಗ್ರಾ.ಪಂ. ಅಧ್ಯಕ್ಷೆ ಶೀಲಾವತಿ ಬೊಳ್ಳಾಜೆ ಶಿಬಿರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪಿಡಿಓ ಲೀಲಾವತಿ, ವೈಧ್ಯಾಧಿಕಾರಿಗಳು ಹಾಗೂ ಗ್ರಾ.ಪಂ.ಸಿಬ್ಬಂದಿಗಳು ಉಪಸ್ಥಿತರಿದ್ದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ.) ಸುಳ್ಯ ತಾಲೂಕಿನ ದೊಡ್ಡತೋಟ ವಲಯದ ಅಧ್ಯಕ್ಷರಾಗಿ ಕಳಂಜ ಒಕ್ಕೂಟದ ಅಧ್ಯಕ್ಷರಾದ ನಾರಾಯಣ ಅವರು ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಉಬರಡ್ಕ ಒಕ್ಕೂಟದ ಜನಾರ್ಧನ, ಕಾರ್ಯದರ್ಶಿಯಾಗಿ ದೊಡ್ಡತೋಟ ವಲಯ ಮೇಲ್ವಿಚಾರಕರಾದ ಸೀತಾರಾಮ ಕಾನಾವು, ಜೊತೆ ಕಾರ್ಯದರ್ಶಿಯಾಗಿ ಸೇವಾಪ್ರತಿನಿಧಿ ದಿವ್ಯ ಪೈಲಾರು, ಕೋಶಾಧಿಕಾರಿಯಾಗಿ ಚೊಕ್ಕಾಡಿ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ವೀಣಾ ಪಡ್ಪು...
ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ವತಿಯಿಂದ ಸೆ.22 ರಂದು ಹರಿಹರ ಪಲ್ಲತ್ತಡ್ಕ ಪ್ರೌಢಶಾಲೆಯಲ್ಲಿ ಸ್ವಚ್ಛತಾ ಹೀ ಸೇವಾ ಪ್ರತಿಜ್ಞಾವಿಧಿ ಬೋಧನೆ ನಡೆಯಿತು. ಈ ಸಂದರ್ಭದಲ್ಲಿ ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಮಣಿಯಾನ, ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ವಿಜಯ ಕುಮಾರ್ ಅಂಙಣ, ಮುಖ್ಯೋಪಾಧ್ಯಾಯರಾದ ರಾಮಚಂದ್ರ ಕಜ್ಜೋಡಿ, ಸಹಶಿಕ್ಷಕರುಗಳು, ವಿದ್ಯಾರ್ಥಿಗಳು, ಗ್ರಾಮ ಪಂಚಾಯತ್ ಸಿಬ್ಬಂದಿಗಳಾದ...
ಕನ್ನಡ ಸಾಹಿತ್ಯ ಪರಿಷತ್ತಿನ ಸಂಪಾಜೆ ಹೋಬಳಿ ಘಟಕದ ಅಧ್ಯಕ್ಷರಾಗಿ ಶ್ರೀ ಗೋಪಾಲ ಪೆರಾಜೆ ಆಯ್ಕೆ ಆಗಿದ್ದಾರೆ. ಸಂಪಾಜೆ ಜೂನಿಯರ್ ಕಾಲೇಜಿನಲ್ಲಿ, ಮಡಿಕೇರಿ ತಾಲೂಕು ಕ.ಸಾ.ಪ. ಅಧ್ಯಕ್ಷರಾದ ಶ್ರೀ ನವೀನ್ ಅಂಬೇಕಲ್ಲು ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಯಿತು. ಕೊಡಗು ಜಿಲ್ಲಾ ಸಾಹಿತ್ಯ ಪರಿಷತ್ತಿನ ಮಾರ್ಗದರ್ಶನದಲ್ಲಿ ಮಡಿಕೇರಿ ತಾಲೂಕು ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಸೇರಿದಂತೆ...
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಕೊಲ್ಲಮೊಗ್ರ, ಎಲಿಮಲೆ ಉಪಕೇಂದ್ರ ವತಿಯಿಂದ ಸೆ.22 ರಂದು ಅಚ್ರಪ್ಪಾಡಿ ಸರಕಾರಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಯೋಗ ತರಬೇತಿಯನ್ನು ಯೋಗ ತರಬೇತುದಾರರು ಶ್ರೀಯುತ ಕೃಷ್ಣಪ್ರಸನ್ನ ನೀಡಿದರು. ಹಾಗೂ ದೇವಚಳ್ಳ ಗ್ರಂಥಾಲಯಕ್ಕೆ ನೂತನವಾಗಿ ನೇಮಕಗೊಂಡಿರುವ ಗ್ರಂಥಪಾಲಕಿ ಶ್ರೀಮತಿ ಪ್ರಫುಲ್ಲ ಶ್ರೀಕಾಂತ್ ಪಾರೆಪ್ಪಾಡಿ ಅವರು ವಿದ್ಯಾರ್ಥಿಗಳಿಗೆ ಗ್ರಂಥಾಲಯದಲ್ಲಿ ಲಭ್ಯವಿರುವ...
ಕೆಲಸ ಮಾಡುತ್ತಿರುವಾಗ ಪಕ್ಕಾಸು ಬಿದ್ದು ಕಾಲು ಜಖಂಗೊಂಡು ಅಶ್ವಸ್ಥಗೊಂಡಿರುವ ಕೊಲ್ಲಮೊಗ್ರ ಗ್ರಾಮದ ಮೋಹನ ಪೈಕರವರ ಮನೆಗೆ ಇಂದು ಕಮಲಾಕ್ಷ ಪೆರ್ನಾಜೆಯವರ ನೇತೃತ್ವದಲ್ಲಿ ಕೆಪಿಸಿಸಿಯಾದ ಹೆಚ್.ಎಂ.ನಂದಕುಮಾರ್ ಭೇಟಿ ನೀಡಿ ಆರೋಗ್ಯ ವಿಚಾರಿಸಿ ಧನಸಹಾಯ ನೀಡಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯ ಭರತ್ ಮುಂಡೋಡಿ, ಸುಳ್ಯ ನಗರ ಕಾಂಗ್ರೆಸ್ ಅಧ್ಯಕ್ಷ ಶಶಿಧರ್ ಎಂ ಜೆ, ವಿಜೇಶ್ ಹಿರಿಯಡ್ಕ ಹಾಗೂ...