Ad Widget

ಉಬರಡ್ಕ : ಶಿಶು ಪ್ರದರ್ಶನ ಮತ್ತು ಪೌಷ್ಟಿಕ ಆಹಾರ ಸಪ್ತಾಹ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಸುಳ್ಯ, ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಗ್ರಾಮ ಪಂಚಾಯತ್ ಉಬರಡ್ಕ ಮಿತ್ತೂರು, ನಂದಿನಿ ಮಹಿಳಾ ಮಂಡಲ ಉಬರಡ್ಕ ಮಿತ್ತೂರು, ಪಂಚಮಿ ಸ್ತ್ರೀ ಶಕ್ತಿ ಗೊಂಚಲು ಸಮಿತಿ ಉಬರಡ್ಕ ಮಿತ್ತೂರು ಇದರ ಸಹಯೋಗದೊಂದಿಗೆ ಹೆಣ್ಣು ಮಕ್ಕಳ ಶಿಶು ಪ್ರದರ್ಶನ ಗ್ರಾಮ ಮಟ್ಟದ ಪೌಷ್ಟಿಕ ಆಹಾರ ಸಪ್ತಾಹ ಕಾರ್ಯಕ್ರಮ ಸೆ. 22 ರಂದು ಉಬರಡ್ಕ ಗ್ರಾ.ಪಂ.ಸಭಾಭವನದಲ್ಲಿ ಜರುಗಿತು.

. . . . . . .

ಸ್ತ್ರೀ ಶಕ್ತಿ ಗೊಂಚಲು ಸಮಿತಿ ಅಧ್ಯಕ್ಷರಾದ ಶ್ರೀಮತಿ ಭಾಗೀರಥಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಸುಶೀಲ.ಪಿ ಪ್ರಾರ್ಥಿಸಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಗುತ್ತಿಗಾರು ವಲಯ ಮೇಲ್ವಿಚಾರಕಿ ಶ್ರೀಮತಿ ಉಷಾ.ಕೆ ಅವರು ಪ್ರಾಸ್ತಾವಿಕ ನುಡಿಗಳನ್ನು ನುಡಿದರು.

ವೇದಿಕೆಯಲ್ಲಿ ಉಬರಡ್ಕ ಮಿತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಪ್ರಕಾಶ್.ಯು, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಸುರೇಶ್.ಎಂ.ಎಚ್, ನಂದಿನಿ ಮಹಿಳಾ ಮಂಡಳಿ ಅಧ್ಯಕ್ಷರಾದ ಶ್ರೀಮತಿ ನಳಿನಾಕ್ಷಿ ಬೇರ್ಪಡ್ಕ, ಅರೋಗ್ಯ ಸುರಕ್ಷತಾಧಿಕಾರಿ ಶ್ರೀಮತಿ ರೇವತಿ, ಸಮುದಾಯ ಅರೋಗ್ಯಾಧಿಕಾರಿ ಕು| ದೀಕ್ಷಿತಾ, ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿ ಪ್ರವೀಣ್ ಕುಮಾರ್ ಉಪಸ್ಥಿತರಿದ್ದರು. ಶ್ರೀಮತಿ ರೇವತಿ.ಎಂ ಪೌಷ್ಟಿಕ ಆಹಾರದ ಬಗ್ಗೆ ಮಾಹಿತಿ ನೀಡಿದರು. ಜಯಪ್ರಕಾಶ್.ಯು ಇವರು ಊಟದ ವ್ಯವಸ್ಥೆಗೆ ತರಕಾರಿ ಮತ್ತು ಬಿಸ್ಕೆಟ್ ನೀಡಿದರು. ಶಿಶು ಪ್ರದರ್ಶನದಲ್ಲಿ ಭಾಗವಹಿಸಿದ ಮಕ್ಕಳಿಗೆ ಮತ್ತು ಪೌಷ್ಟಿಕ ಆಹಾರ ತಯಾರಿಸಿ ತಂದ ಎಲ್ಲರಿಗೂ ಬಹುಮಾನ ವಿತರಿಸಲಾಯಿತು.

ಪೌಷ್ಟಿಕ ಆಹಾರದ ತಯಾರಿಕೆಯಲ್ಲಿ ವಿಜೇತರಾದವರಿಗೆ ಬಹುಮಾನವನ್ನು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಸುರೇಶ್.ಎಂ.ಹೆಚ್ ಮತ್ತು ಗ್ರಾಮ ಪಂಚಾಯತ್ ಸದಸ್ಯರುಗಳು ನೀಡಿದರು. ಮಹಿಳಾ ಮಂಡಲದ ವತಿಯಿಂದ ಕಡಿಮೆ ತೂಕದ ಮಕ್ಕಳಿಗೆ ಪ್ರೋಟೀನ್ ಪೌಡರ್ ನೀಡಲಾಯಿತು. ಅಂಗನವಾಡಿ ಕಾರ್ಯಕರ್ತೆಯರಾದ ಶ್ರೀಮತಿ ಸುಮಿತ್ರಾ ಸ್ವಾಗತಿಸಿ ಶ್ರೀಮತಿ ಸುಶೀಲ ಧನ್ಯವಾದ ಸಮರ್ಪಿಸಿದರು.

ಕು| ಗೀತಾ ಕಾರ್ಯಕ್ರಮ ನಿರೂಪಿಸಿ ಶ್ರೀಮತಿ ಶೋಭಾ ಮತ್ತು ಶ್ರೀಮತಿ ಪ್ರೇಮಲತಾ ಸಹಕರಿಸಿದರು. ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯತ್ ಆಡಳಿತ ಮಂಡಳಿ ಮತ್ತು ಸಿಬ್ಬಂದಿಯವರು ಸಹಕಾರ ನೀಡಿದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!