
ಐವರ್ನಾಡು ಗ್ರಾಮ ಪಂಚಾಯತ್ ಮತ್ತು ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಶ್ರಯದಲ್ಲಿ ಗೆಳೆಯರ ಬಳಗ ದೇರಾಜೆ,ಮಂಜುಶ್ರೀ ಗೆಳೆಯರ ಬಳಗ ,ಸ್ನೇಹಿತರ ಕಲಾ ಸಂಘ ಬೆಳ್ಳಾರೆ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ಮತ್ತು ರೆಡ್ ಕ್ರಾಸ್ ಸಂಸ್ಥೆ ದ.ಕ ಇವರ ಸಹಯೋಗದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ 72 ನೇ ಹುಟ್ಟುಹಬ್ಬದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರವು ಸೆ.24 ರಂದು ಐವರ್ನಾಡು ಗ್ರಾಮ ವಿಕಾಸ ಸಭಾಭವನದಲ್ಲಿ ನಡೆಯಿತು.
ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿ ಸುಧಾಕರ ರೈ ನೆಟ್ ಕಾಂ ದೀಪ ಬೆಳಗಿಸಿ ಉದ್ಘಾಟಿಸಿ ಶುಭಹಾರೈಸಿದರು. ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಕೀಲಾಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ರೆಡ್ ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ತಿಪ್ಪೇಶಪ್ಪ, ಜಿಲ್ಲಾ ಪ್ರತಿನಿಧಿ ಗಣೇಶ್ ಭಟ್, ಕೋಶಾಧಿಕಾರಿ ವಿನಯ ಕುಮಾರ್, ಪಂಚಾಯತ್ ಪಿ.ಡಿ.ಒ ಶ್ಯಾಮ್ ಪ್ರಸಾದ್, ಗೆಳೆಯರ ಬಳಗದ ಅಧ್ಯಕ್ಷ ಅರುಣ್ ಗುತ್ತಿಗಾರುಮೂಲೆ, ಕಾರ್ಯದರ್ಶಿ ಅನಿಲ್, ಮಂಜುಶ್ರೀ ಗೆಳೆಯರ ಬಳಗದ ಅಧ್ಯಕ್ಷ ನಟರಾಜ್ ಸಿ.ಕೂಪ್, ಬೆಳ್ಳಾರೆ ಸ್ನೇಹಿತರ ಕಲಾ ಸಂಘದ ಅಧ್ಯಕ್ಷ ವಸಂತ ಉಲ್ಲಾಸ್ ವೇದಿಕೆಯಲ್ಲಿದ್ದರು.ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಎಸ್.ಎನ್.ಮನ್ಮಥ ಸ್ವಾಗತಿಸಿ,ಕಾರ್ಯಕ್ರಮ ನಿರೂಪಿಸಿದರು.ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವಿಪ್ರಸಾದ್ ಸಿ.ಕೆ.ವಂದಿಸಿದರು.