- Friday
- November 1st, 2024
ಪಂಜ : ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಅಮೃತವರ್ಷಿಣಿ ನೂತನ ಗೋದಾಮು ಕಟ್ಟಡ (ನಬಾರ್ಡ್ ಎಂ.ಎಸ್ ಸಿ ಯೋಜನೆ) ಉದ್ಘಾಟನಾ ಸಮಾರಂಭ ಅ.1 ರಂದು ಬೆಳಗ್ಗೆ 10.30 ಕ್ಕೆ ಬೀದಿಗುಡ್ಡೆಯಲ್ಲಿ ನಡೆಯಲಿದೆ.ಬಂದರು ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಗೋದಾಮು ಕಟ್ಟಡದ ಉದ್ಘಾಟನೆ ಮಾಡಲಿದ್ದಾರೆ. ಆದರ್ಶವರ್ಷಿಣಿ ಸಭಾಭವನ ಉದ್ಘಾಟನೆಯನ್ನು ಮಂಗಳೂರು ಲೋಕಸಭಾ ಕ್ಷೇತ್ರ...
ದಾವಣಗೆರೆಯ ಸಪ್ತಋಷಿ ಯೋಗಾಸನ ಕ್ರೀಡಾ ಅಕಾಡೆಮಿ ವಾರ್ಷಿಕೋತ್ಸವದಂದು ನಡೆದ ಯೋಗಾಸನ ಸ್ಪರ್ಧೆಯಲ್ಲಿ ಭಾಗವಹಿಸಿದ್ದ 80 ವಿದ್ಯಾರ್ಥಿಗಳಲ್ಲಿ ಪಂಜ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ 4ನೇ ತರಗತಿ ವಿದ್ಯಾರ್ಥಿ ಮಾನ್ಯ ಪಲ್ಲೋಡಿ ವೃಕ್ಷಾಸನ, ಉತ್ಕಟಾಸನ, ಧನುರಾಸನ, ಸರ್ವಾಂಗಾಸನದಲ್ಲಿ ನಿರಂತರ 120 ಸೆಕೆಂಡುಗಳ ಕಾಲ ಯೋಗ ಪ್ರದರ್ಶಿಸಿ ನೊಬೆಲ್ ವರ್ಲ್ಡ್ ರೆಕಾರ್ಡ್ ಬುಕ್ ನಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾಳೆ....
ಹರಿಹರ ಪಲ್ಲತ್ತಡ್ಕ ಗ್ರಾಮದಲ್ಲಿ ಮದ್ಯದಂಗಡಿ ತೆರೆಯುವ ವಿರುದ್ಧ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ.) ಬಿ.ಸಿ ಟ್ರಸ್ಟ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್(ರಿ.) ಸುಳ್ಯ ತಾಲೂಕು, ಶೌರ್ಯಶ್ರೀ ವಿಪತ್ತು ನಿರ್ವಹಣಾ ಘಟಕ ಸುಬ್ರಹ್ಮಣ್ಯ ವಲಯ ಹಾಗೂ ಮದ್ಯ ಮುಕ್ತ ಹೋರಾಟ ಸಮಿತಿ ಹರಿಹರ ಪಲ್ಲತ್ತಡ್ಕ ಇದರ ನೇತೃತ್ವದಲ್ಲಿ ಹರಿಹರ ಪಲ್ಲತ್ತಡ್ಕ ಮುಖ್ಯ ಪೇಟೆಯಲ್ಲಿ ಸೆ.29...
ಕರ್ನಾಟಕ ರಾಜ್ಯ ರೈತ ಸಂಘ ಸುಳ್ಯ ತಾಲೂಕು ಘಟಕದ ನೂತನ ತಾಲೂಕು ಕಚೇರಿ ಉದ್ಘಾಟನೆ ಹಾಗೂ ಕೃಷಿ ಬದುಕು ಕುರಿತು ವಿಚಾರ ವಿನಿಮಯ ಕಾರ್ಯಕ್ರಮ ಅ.1ರಂದು ಬೆಳಗ್ಗೆ 10.30 ಕ್ಕೆ ಪೈಚಾರು ಬಸ್ ನಿಲ್ದಾಣದ ಬಳಿ ನಡೆಯಲಿದೆ. ಕಾರ್ಯಕ್ರಮವನ್ನು ಪ್ರಗತಿಪರ ಕೃಷಿಕರು ಹಾಗೂ ಚಿಂತಕರಾದ ತೇಜಕುಮಾರ್ ಕುಡೆಕಲ್ಲು ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ತಾಲೂಕು ರೈತ ಸಂಘದ ಅಧ್ಯಕ್ಷ...
ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಗ್ರಾಮ್ ಒನ್ ನಾಗರಿಕಾ ಸೇವಾ ಕೇಂದ್ರ ಅರಂತೋಡು ಇದರ ಆಶ್ರಯದಲ್ಲಿ ಪ್ರೆಸ್ ಕ್ಲಬ್ ಸಹಯೋಗದಲ್ಲಿ ನಡೆದ ಪತ್ರಕರ್ತರ ಆರೋಗ್ಯ ತಪಾಸಣೆ ಹಾಗೂ ಆಭಾ ಕಾರ್ಡ್ ನೋಂದಣಿ ಶಿಬಿರ ಸೆ.28 ರಂದು ನಡೆಯಿತು. ಕಾರ್ಯಕ್ರಮಕ್ಕೆ ತಾಲೂಕು ಆರೋಗ್ಯ ಅಧಿಕಾರಿ ಡಾ. ನಂದಕುಮಾರ್ ಚಾಲನೆ ನೀಡಿ ಮಾತನಾಡಿ, ಒಂದು ದೇಶ...
ಹರಿಹರ ಪಲ್ಲತ್ತಡ್ಕದಲ್ಲಿ ಮದ್ಯದಂಗಡಿ ತೆರೆಯದಂತೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್ ಅವರಿಗೆ ಸೆ.27ರಂದು ಪತ್ರಕರ್ತ ಬಾಲಕೃಷ್ಣ ಭೀಮಗುಳಿಯವರು ಊರವರ ಪರವಾಗಿ ಮನವಿ ನೀಡಿದರು. ಪತ್ರಕರ್ತ ಬಾಲಕೃಷ್ಣ ಭೀಮಗುಳಿ ಉಸ್ತುವಾರಿ ಸಚಿವರನ್ನು ಭೇಟಿಯಾಗಿ ಹರಿಹರ ಪಲ್ಲತ್ತಡ್ಕ ಗ್ರಾಮದಲ್ಲಿ ಮದ್ಯದಂಗಡಿ ತೆರೆಯದಂತೆ ಹಾಗೂ ತೆರೆದಲ್ಲಿ ಯುವ ಸಮೂಹ ದುಶ್ಚಟಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಬಲಿಯಾಗಿ ಊರಿನಲ್ಲಿ ಅಶಾಂತಿ ಸೃಷ್ಟಿಗೆ...
ಶ್ರೀ ಶಾರದಾ ಮಹಿಳಾ ಪದವಿ ಪೂರ್ವ ಕಾಲೇಜು ಸುಳ್ಯ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ಮಂಗಳೂರು ಜಂಟಿ ಆಶ್ರಯದಲ್ಲಿ ಜೂನಿಯರ್ ರೆಡ್ ಕ್ರಾಸ್ ಘಟಕದ ಉದ್ಘಾಟನಾ ಕಾರ್ಯಕ್ರಮ ಸೆ.28 ರಂದು ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ನೆಹರೂ ಸ್ಮಾರಕ ಮಹಾವಿದ್ಯಾಲಯದ ಪ್ರಾಧ್ಯಾಪಕಿ ಡಾ. ಅನುರಾಧ ಕುರುಂಜಿ ನೆರವೇರಿಸಿದರು. ಅಧ್ಯಕ್ಷತೆಯನ್ನು ದ ಕ ಗೌಡ ವಿದ್ಯಾ ಸಂಘದ...
ಕುಕ್ಕೆ ಶ್ರೀ ಸುಬ್ರಮಣೇಶ್ವರ ಮಹಾವಿದ್ಯಾಲಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ಜನಪರ ಉತ್ಸವವ ಕಾರ್ಯಕ್ರಮ ಸೆ. 27ರಂದು ನಡೆಯಿತು.ಕಾರ್ಯಕ್ರಮವನ್ನು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಲಲಿತಾ ಗುಂಡಡ್ಕ ಉದ್ಘಾಟಿಸಿದರು.ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಡಾ. ನಿಂಗಯ್ಯ ಅಧ್ಯಕ್ಷತೆ ವಹಿಸಿದ್ದರು. ಕೆ ಎಸ್ ಎಸ್ ಕಾಲೇಜು ಸುಬ್ರಮಣ್ಯನ ಪ್ರಾಂಶುಪಾಲ...
ರಿಕ್ಷಾದಲ್ಲಿ ಸಿಕ್ಕಿದ ಮೊಬೈಲನ್ನು ಅದರ ವಾರಸುದಾರರಿಗೆ ಹಿಂತಿರುಗಿಸುವ ಮೂಲಕ ಚಾಲಕ ಪ್ರಾಮಾಣಿಕತೆ ಮೆರೆದ ಘಟನೆ ಕಲ್ಲುಗುಂಡಿಯಲ್ಲಿ ನಡೆದಿದೆ. ಕಲ್ಲುಗುಂಡಿಯಲ್ಲಿ ಅಟೋ ಚಾಲಕ ತೊಡಿಕಾನ ಗ್ರಾಮದ ಪ್ರಭಾಕರ ಕಾಡುಪಂಜ ಅವರಿಗೆ ತನ್ನ ರಿಕ್ಷಾದಲ್ಲಿ ಸಿಕ್ಕಿದ ಸುಮಾರು ಹತ್ತು ಸಾವಿರ ಮೌಲ್ಯದ ಸ್ಮಾರ್ಟ್ ಫೋನ್ ಪ್ರಾಮಾಣಿಕವಾಗಿ ಹಿಂತಿರುಗಿಸಿದ್ದು ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಹಿಂದೆಯೂ ಅವರಿಗೆ ಬಾಲೆಂಬಿ ಬಳಿ...
ಸುಳ್ಯ ನಗರ ಪಂಚಾಯತ್ ವತಿಯಿಂದ ಸ್ವಚ್ಚತೆಯ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಾಗೂ ಸ್ವಚ್ಚತಾ ಕಾರ್ಯಕ್ರಮ ಇಂದು ಬೆಳಿಗ್ಗೆ ನಡೆಯಿತು. ಕಾರ್ಯಕ್ರಮದಲ್ಲಿ ನ.ಪಂ.ಅಧ್ಯಕ್ಷ ವಿನಯಕುಮಾರ್ ಕಂದಡ್ಕ, ಮುಖ್ಯಾಧಿಕಾರಿ ಸುಧಾಕರ ಎಂ.ಎಚ್., ನ.ಪಂ.ಸದಸ್ಯರಾದ ಬುದ್ಧನಾಯ್ಕ್, ಸುಧಾಕರ, ಸುಶೀಲ ಜಿನ್ನಪ್ಪ, ಲೀಲಾವತಿ ಕುರುಂಜಿ, ಕಿಶೋರಿ ಶೇಟ್, ಬೂಡು ರಾಧಾಕೃಷ್ಣ ರೈ ಹಾಗೂ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
Loading posts...
All posts loaded
No more posts