Ad Widget

ಹರಿಹರಪಲ್ಲತ್ತಡ್ಕ : ಮದ್ಯದಂಗಡಿ ತೆರೆಯದಂತೆ ಉಸ್ತುವಾರಿ ಸಚಿವರಿಗೆ ಮನವಿ

ಹರಿಹರ ಪಲ್ಲತ್ತಡ್ಕದಲ್ಲಿ ಮದ್ಯದಂಗಡಿ ತೆರೆಯದಂತೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್ ಅವರಿಗೆ ಸೆ.27ರಂದು ಪತ್ರಕರ್ತ ಬಾಲಕೃಷ್ಣ ಭೀಮಗುಳಿಯವರು ಊರವರ ಪರವಾಗಿ ಮನವಿ ನೀಡಿದರು.

. . . . .

ಪತ್ರಕರ್ತ ಬಾಲಕೃಷ್ಣ ಭೀಮಗುಳಿ ಉಸ್ತುವಾರಿ ಸಚಿವರನ್ನು ಭೇಟಿಯಾಗಿ ಹರಿಹರ ಪಲ್ಲತ್ತಡ್ಕ ಗ್ರಾಮದಲ್ಲಿ ಮದ್ಯದಂಗಡಿ ತೆರೆಯದಂತೆ ಹಾಗೂ ತೆರೆದಲ್ಲಿ ಯುವ ಸಮೂಹ ದುಶ್ಚಟಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಬಲಿಯಾಗಿ ಊರಿನಲ್ಲಿ ಅಶಾಂತಿ ಸೃಷ್ಟಿಗೆ ಕಾರಣ ಮಾಡಿಕೊಡುತ್ತದೆ. ಹೀಗಾಗಿ ಗ್ರಾಮದಲ್ಲಿ ಮದ್ಯದಂಗಡಿ ತೆರೆಯಲು ಅವಕಾಶ ನೀಡಬಾರದು ಎಂದು ವಿನಂತಿಸಿದರು.

ಸೆ.29 ರಂದು ಗ್ರಾಮದಲ್ಲಿ ಹಮ್ಮಿಕೊಂಡ ಪ್ರತಿಭಟನೆ ರ್ಯಾಲಿ ಹಾಗೂ ಪ್ರತಿಭಟನೆಯ ಮುದ್ರಿತ ಕರಪತ್ರವನ್ನು ಸಚಿವರಿಗೆ ಮನವಿಯೊಂದಿಗೆ ನೀಡಿದ್ದಾರೆ.ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸುವುದಾಗಿ ಸಚಿವರಿಂದ ಭರವಸೆ ದೊರೆತಿದೆ ಎಂದು ಅವರು ತಿಳಿಸಿದ್ದಾರೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!