
ಚೊಕ್ಕಾಡಿ ಪ್ರೌಢಶಾಲೆ ಮತ್ತು ಆಂಗ್ಲ ಮಾಧ್ಯಮ ಶಾಲೆ ಕುಕ್ಕುಜಡ್ಕದಲ್ಲಿ ಅಕ್ಟೋಬರ್ 2ರಂದು ಗಾಂಧೀ ಜಯಂತಿಯನ್ನು ಆಚರಿಸಲಾಯಿತು. ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಸಂಕೀರ್ಣ ಚೊಕ್ಕಾಡಿಯವರು ಹಾಗೂ ಆಂಗ್ಲಮಾಧ್ಯಮ ಶಾಲೆ ಮುಖ್ಯೋಪಾಧ್ಯಾಯಿನಿ ಚೈತ್ರಾ ಅವರು ಮಹಾತ್ಮಾ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿದರು. ಅನಂತರ ಗಾಂಧೀಜಿಯವರ ಮೆಚ್ಚಿನ ಗೀತೆಗಳನ್ನು ಹಾಡಲಾಯಿತು. ಶಿಕ್ಷಕರಾದ ಹರಿಪ್ರಸಾದ್ ಅವರು ಸ್ವಚ್ಛತೆ ಬಗ್ಗೆ ಪ್ರತಿಜ್ಞಾವಿಧಿ ಬೋಧಿಸಿದರು. ಈ ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.
ಕಾರ್ಯಕ್ರಮದ ಬಳಿಕ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು.