ಗಾಂಧಿ ಜಯಂತಿಯ ಅಂಗವಾಗಿ ಇಂದು ಬೆಳ್ಳಾರೆ ಗೃಹ ರಕ್ಷಕ ದಳದ ಕಚೇರಿಯಲ್ಲಿ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗಾಂಧೀಜಿಯವರ ತ್ಯಾಗ, ಸೇವೆ ಮತ್ತು ಬಲಿದಾನವನ್ನು ಸ್ಮರಿಸಲಾಯಿತು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಅವರು ಮಾತನಾಡಿ "ಗಾಂಧೀಜಿಯವರು ಹಾಕಿ ಕೊಟ್ಟ ತ್ಯಾಗ, ಅಹಿಂಸೆ ಮತ್ತು ತತ್ವದ ಹಾದಿಯಲ್ಲಿ ನಡೆದು, ಅವರ ಆದರ್ಶಗಳನ್ನು ನಮ್ಮ ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾದ ತುರ್ತು ಅಗತ್ಯ ಈಗ ಇದೆ. ಪ್ರತಿಯೊಬ್ಬರಲ್ಲಿಯೂ ಗಾಂಧೀಜಿಯವರ ಆದರ್ಶಗಳು ಇದ್ದರೂ ಯಾರು ಅದನ್ನು ಪರಿಣಾಮಕಾರಿಯಾಗಿ ಪಾಲಿಸುತ್ತಿಲ್ಲ. ಈ ಸುಪ್ತವಾಗಿರುವ ಪ್ರಜ್ಞೆಗಳನ್ನು ಬಡಿದೆಬ್ಬಿಸಬೇಕಾದ ತುರ್ತು ಅಗತ್ಯ ಇದೆ. ಆಗ ಮಾತ್ರ ಸುಭೀಕ್ಷಾ ಹಾಗೂ ಆರೋಗ್ಯ ಪೂರ್ಣ ಭವ್ಯ ಭಾರತದ ನಿರ್ಮಾಣ ಸಾಧ್ಯ ಮತ್ತು ಗಾಂಧೀಜಿಯವರು ಕನಸು ಕಂಡ ರಾಮ ರಾಜ್ಯ ನಿರ್ಮಾಣ ಸಾಧ್ಯವಿದೆ " ಎಂದು ನುಡಿದರು.
ಈ ಸಂದರ್ಭದಲ್ಲಿ ಬೆಳ್ಳಾರೆ ಘಟಕದ ಘಟಕಾಧಿಕಾರಿ ವಸಂತ ಕುಮಾರ್, ಹಿರಿಯ ಗೃಹರಕ್ಷಕರಾದ ಹೂವಪ್ಪ ಪ್ರಭಾಕರ ನಾಯಕ್, ಪದ್ಮನಾಭ,ಲಿಂಗಮ್ಮ ಹಾಗೂ ಇತರ ಗೃಹರಕ್ಷಕರು ಮತ್ತು ಗೃಹರಕ್ಷಕಿಯರು ಉಪಸ್ಥಿತರಿದ್ದರು
Like this:
Like Loading...