Ad Widget

ಗಾಂಧಿನಗರ : ಶಿಕ್ಷಕರ ದಿನಾಚರಣೆ ಮತ್ತು ಸನ್ಮಾನ ಕಾರ್ಯಕ್ರಮ

ಗಾಂಧಿನಗರದ ಶುಭಶ್ರೀ ಮಹಿಳಾ ಮಂಡಲ ಹಾಗೂ ಇನ್ನರ್ ವೀಲ್ ಕ್ಲಬ್, ಸುಳ್ಯ ಇದರ ಜಂಟಿ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವು ಶಿವಕೃಪಾ ಕಲಾ ಮಂದಿರದಲ್ಲಿ ನಡೆಯಿತು. ಶ್ರೀಮತಿ ಲೀಲಾದಾಮೋದರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭಶ್ರೀ ಮಹಿಳಾ ಮಂಡಲದ ವತಿಯಿಂದ ಶಿಕ್ಷಕರಿಗೆ ಕೊಡಮಾಡುವ “ಉತ್ತಮ ಶಿಕ್ಷಕ ಪ್ರಶಸ್ತಿ” ಸನ್ಮಾನ ನೆರವೇರಿಸಿದರು. ಶಿಕ್ಷಕ ವೃತ್ತಿ ಸಮಾಜದಲ್ಲಿ ಒಂದು ಗೌರವಯುತ ಸ್ಥಾನವನ್ನು ಪುರಾಣಗಳ ಕಾಲದಿಂದ ಇಲ್ಲಿಯವರೆಗೆ ಉಳಿಸಿಕೊಂಡು ಬಂದಿದೆ ಎಂದರು. ಪ್ರಶಸ್ತಿ ಪಡೆದ ಆರ್.ಎಂ.ಎಸ್.ಎ. ಪ್ರೌಢಶಾಲೆ ಸಂಪಾಜೆ ಇಲ್ಲಿನ ಮುಖ್ಯ ಶಿಕ್ಷಕಿ ಶ್ರೀಮತಿ ಜಯಶ್ರೀ ಹಾಗೂ ಸ.ಉ.ಹಿ.ಪ್ರಾ.ಶಾಲೆ, ಕೋಲ್ಚಾರು ಇಲ್ಲಿನ ಶಿಕ್ಷಕಿ ಶ್ರೀಮತಿ ಜಲಜಾಕ್ಷಿ ಇವರು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಇನ್ನರ್ ವೀಲ್ ಕ್ಲಬ್ ಪೂರ್ವಾಧ್ಯಕ್ಷೆ ಶ್ರೀಮತಿ ಜಯಲಕ್ಷ್ಮೀ .ಜೆ. ರೈ ಶುಭಹಾರೈಸಿದರು. ಶ್ರೀಮತಿ ಸುನಂದಾ ಶೆಟ್ಟಿ ಹಾಗೂ ಉಷಾ ಶೆಟ್ಟಿ ಸನ್ಮಾನ ಪತ್ರ ವಾಚಿಸಿದರು. ಕಲ್ಪಲತಾರವರು ಅತಿಥಿಗಳ ಪರಿಚಯ ಮಾಡಿದರು. ಶುಭಶ್ರೀ ಮಹಿಳಾ ಮಂಡಲದ ಅಧ್ಯಕ್ಷೆ ಶ್ರೀಮತಿ ಶಶಿಕಲಾ ಹರಪ್ರಸಾದ್ ಸ್ವಾಗತಿಸಿ, ಇನ್ನರ್ ವೀಲ್ ಕಾರ್ಯದರ್ಶಿ ಶ್ರೀಮತಿ ಸವಿತಾ ವಂದಿಸಿದರು.ಮಹಿಳಾ ಮಂಡಲದ ಖಜಾಂಚಿ ಗಿರಿಜಾ ಎಂ.ವಿ ಪ್ರಾರ್ಥಿಸಿದರು.ಶ್ರೀಮತಿ ಧನಲಕ್ಷ್ಮೀ ಕುದ್ಪಾಜೆ ಕಾರ್ಯಕ್ರಮ ನಿರೂಪಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading