ಗುತ್ತಿಗಾರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಅ.02 ರಂದು ಗಾಂಧಿ ಜಯಂತಿ ಗ್ರಾಮ ಸಭೆ ಹಾಗೂ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮವು ಗುತ್ತಿಗಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ರೇವತಿ ಆಚಳ್ಳಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ನಂತರ ಪಂಚಾಯತ್ ಘನತ್ಯಾಜ್ಯ ಘಟಕದ ಸಿಬ್ಬಂದಿಗಳಿಗೆ ಸರಕಾರದ ಅನುದಾನದಿಂದ ಬಂದ ಸಮವಸ್ತ್ರವನ್ನು ವಿತರಿಸಲಾಯಿತು. ನಂತರ ಗುತ್ತಿಗಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ರೇವತಿ ಆಚಳ್ಳಿ ಹಾಗೂ ಉಪಾಧ್ಯಕ್ಷರಾದ ಶ್ರೀಮತಿ ಪ್ರಮೀಳಾ ಭಾಸ್ಕರ ಎರ್ಧಡ್ಕ ಇವರುಗಳು ಗ್ರಾಮ ಪಂಚಾಯತ್ ಗ್ರಂಥಾಲಯದ “ಅಮ್ಮನಿಗಾಗಿ ಒಂದು ಪುಸ್ತಕ” ಅಭಿಯಾನಕ್ಕೆ ಚಾಲನೆ ನೀಡಿದರು.
ಸ್ವಚ್ಛತೆಯ ಬಗ್ಗೆ ಗುತ್ತಿಗಾರು ಗ್ರಾಮ ಪಂಚಾಯತ್ ಸದಸ್ಯರಾದ ವೆಂಕಟ್ ವಳಲಂಬೆ ಮಾತನಾಡಿದರು. ಗ್ರಂಥಾಲಯದ ಅಮ್ಮನಿಗಾಗಿ ಒಂದು ಪುಸ್ತಕ ಅಭಿಯಾನದ ಬಗ್ಗೆ ಗ್ರಂಥಾಲಯ ಮೇಲ್ವಿಚಾರಕಿ ಶ್ರೀಮತಿ ಅಭಿಲಾಷಾರವರು ಸಭೆಗೆ ತಿಳಿಸಿ ಅಂಗನವಾಡಿ ಪುಟಾಣಿಗಳು ಪುಸ್ತಕ ಎರವಲು ಪಡೆದರು. ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಶ್ರೀ ಧನಪತಿ ಅವರು ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್ಯಕ್ರಮಕ್ಕೆ ಸಹಕರಿಸಿದ ಎಲ್ಲರಿಗೂ ಗ್ರಂಥಾಲಯ ಮೇಲ್ವಿಚಾರಕಿ ಧನ್ಯವಾದ ಸಮರ್ಪಿಸಿದರು. ಸಿಬ್ಬಂದಿ ಶ್ರೀಮತಿ ತೇಜೇಶ್ವರಿ ಕಾರ್ಯಕ್ರಮ ನಿರೂಪಿಸಿದರು.
ವೀರಾಂಜನೇಯ ಸ್ಪೋರ್ಟ್ಸ್ ಕ್ಲಬ್ ಗುತ್ತಿಗಾರು ಇದರ ಅಧ್ಯಕ್ಷರು, ಸರ್ವಸದಸ್ಯರು ಹಾಗೂ ಗ್ರಾಮ ಪಂಚಾಯತ್ ಸಹಯೋಗದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು. ಗ್ರಾಮ ಪಂಚಾಯತ್ ಸದಸ್ಯರು, ಅಮರ ಸಂಜೀವಿನಿ ಒಕ್ಕೂಟದ ಅಧ್ಯಕ್ಷರು, ಸದಸ್ಯರು, ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.
ವರದಿ :- ಉಲ್ಲಾಸ್ ಕಜ್ಜೋಡಿ