Ad Widget

ಬಾಳಿಲ: ಸಾರ್ವಜನಿಕ ಶ್ರೀ ದೇವತಾರಾಧನಾ ಸಮಿತಿ ವತಿಯಿಂದ 18ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ

ಸಾರ್ವಜನಿಕ ಶ್ರೀ ದೇವತಾರಾಧನಾ ಸಮಿತಿ ಬಾಳಿಲ-ಮುಪ್ಪೆರ್ಯ ಇದರ ಆಶ್ರಯದಲ್ಲಿ 18ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಅ.4 ರಿಂದ ಅ.5 ರವರೆಗೆ ಬಾಳಿಲ ವಿದ್ಯಾಬೋಧಿನೀ ಹಿ ಪ್ರಾ, ಶಾಲಾ ವಠಾರದಲ್ಲಿ ಜರಗಲಿದೆ.

. . . . . . .

ಅ. 4 ರ ಬೆಳಿಗ್ಗೆ ಶಾರದಾ ದೇವಿಯ ವಿಗ್ರಹ ಆಗಮನ, ಶಾರದಾದೇವಿಯ ಪ್ರತಿಷ್ಠೆ, ಕಿರೀಟಧಾರಣೆ, ಶಾರದಾದೇವಿಗೆ ಚಿನ್ನದ ಕಾರಿಮಣಿ ಹಾಗೂ ತಾಳಿ ಸಮರ್ಪಣೆ ನಡೆಯಿತು. ಕರಿಮಣಿ ಸರ, ತಾಳಿಯನ್ನು ಬಿ.ಎಸ್.ಎನ್.ಎಲ್ ನಿವೃತ್ತ ಉದ್ಯೋಗಿ ಎ.ಕೆ. ನಾಯ್ಕ ಅಮೆಬೈಲು ಮತ್ತು ಅವರ ಪತ್ನಿ ಶ್ರೀಮತಿ ಶೋಭ ಎ.ಕೆ. ನಾಯ್ಕ್ ಸಮರ್ಪಿಸಿದರು.

ಈ ಸಂದರ್ಭದಲ್ಲಿ ಸಮಿತಿಯ ಗೌರವಾಧ್ಯಕ್ಷ ರಾಧಾಕೃಷ್ಣ ರಾವ್ ಉಡುವೆಕೋಡಿ, ಅಧ್ಯಕ್ಷ ಶೇಷಪ್ಪ ಸರವ ಕಾರ್ಯಾಧ್ಯಕ್ಷ ಸುಧಾಕರ ರೈ ಎ.ಎಂ, ಕಾರ್ಯದರ್ಶಿ ಪವನ್ ರೈ ಆಗಲ್ಪಾಡಿ, ಮತ್ತು ಪದಾಧಿಕಾರಿಗಳು, ಸದಸ್ಯರು, ಮಹಿಳಾ ಸಮಿತಿ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು. ನಂತರ ಗಣಪತಿ ಹವನ ನಡೆದು ಉದ್ಘಾಟನಾ ಸಮಾರಂಭ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಾಳಿಲ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಸವಿತಾ ಗುರುರಾಜ್ ವಹಿಸಿದ್ದರು. ಕಾರ್ಯಕ್ರಮವನ್ನು ಕೆವಿಜಿ ಇಂಜಿನಿಯರಿಂಗ್ ಕಾಲೇಜಿನ ನಿವೃತ್ತ ವಿಭಾಗ ಮುಖ್ಯಸ್ಥ ದೇರಣ್ಣ ರೈ ಬಿ. ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಕಳಂಜ ಬಾಳಿಲ ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷ ಎಂ. ಕೂಸಪ್ಪ ಗೌಡ ಮುಗುಪ್ಪು ಮತ್ತು ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಯಶೋಧರ ನಾರಾಲು ಉಪಸ್ಥಿತರಿದ್ದರು. ಬೆಳಿಗ್ಗೆ ಬಾಬು ಅಜಿಲ ಬಾಳಿಲ ಮತ್ತು ತಂಡದಿಂದ ಭಜನಾ ಕಾರ್ಯಕ್ರಮ ನಡೆಯಿತು ನಂತರ ಮುಕ್ತ 40 ಕೆ.ಜಿ, ವಿಭಾಗದ ಕಬಡ್ಡಿ ಪಂದ್ಯಾಟ ಜರಗಲಿದೆ. ಪುರುಷರಿಗೆ, ಮಹಿಳೆಯರಿಗೆ ಹಗ್ಗ ಜಗ್ಗಾಟ, ಅಂಗನವಾಡಿಯಿಂದ 10ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ವಿವಿಧ ಕ್ರೀಡಾ ಸ್ಪರ್ಧೆಗಳು, ಸಾರ್ವಜನಿಕ ಮಹಿಳೆಯರಿಗೆ ಲಲಿತ ಸಹಸ್ರನಾಮ ಪಾರಾಯಣ, ಕುಂಕುಮಾರ್ಚನೆ ನಡೆಯಲಿದೆ.

ಸಂಜೆ 7.00 ಗಂಟೆಗೆ ಮೆಸ್ಕಾಂ ಸಿಬ್ಬಂದಿಗಳಾದ ಮಂಜುನಾಥ್ ಮತ್ತು ವಿಕ್ರಂರಿಗೆ ಸೇವಾ ಪುರಸ್ಕಾರ ನಡೆಯಲಿದೆ. ಬಳಿಕ ಲಯನ್ ಕಿಶೋರ್ ಡಿ ಶೆಟ್ಟಿ ನಿರ್ಮಾಣದ ಮೇಲೆ ಪಾಡದೆ ತುಳು ಹಾಸ್ಯ ನಾಟಕ ನಡೆಯಲಿದೆ. ಅ. 5ರಂದು ಬೆಳಿಗ್ಗೆ 10ರಿಂದ ಶ್ರೀರಾಮ ಭಜನಾ ಮಂಡಳಿ ಕಲ್ಮಡ್ಕ ಇವರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ.

ಮಧ್ಯಾಹ್ನ 12.00 ಗಂಟೆಯಿಂದ ಸಮಿತಿಯ ಗೌರವಾಧ್ಯಕ್ಷ ರಾಧಾಕೃಷ್ಣ ರಾವ್ ಯು ರವರ ಅಧ್ಯಕ್ಷತೆಯಲ್ಲಿ ಧಾರ್ಮಿಕ ಸಭೆ ಮತ್ತು ಅಭಿನಂದನಾ ಕಾರ್ಯಕ್ರಮ ನಡೆಯಲಿದ್ದು, ಕರ್ನಾಟಕ ಹಿಂದೂ ಜಾಗರಣ ವೇದಿಕೆಯ ಬ ಗಣರಾಜ ಭಟ್ ಕೆದಿಲ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ಬಾಳಿಲ ವಿದ್ಯಾಬೋಧಿನೀ ಹಿ.ಪ್ರಾ ಶಾಲಾ ನಿವೃತ್ತ ಶಿಕ್ಷಕ ಸೀತಾರಾಮ ರಾವ್ ಕಡಬ ಇವರಿಗೆ ರಾಮಚಂದ್ರ ಕೆಡಿ ಸ್ಮರಣಾರ್ಥ ಶ್ರೀ ಶಾರದೋತ್ಸವ ಪ್ರಶಸ್ತಿ ಪ್ರದಾನ ನಡೆಯಲಿದೆ. ಎಸ್.ಎಸ್.ಎಲ್.ಸಿ. ಸಾಧಕರಿಗೆ ಮತ್ತು ವಿಶೇಷ ಪ್ರತಿಭಾವಂತರಿಗೆ ಪ್ರತಿಭಾ ಪುರಸ್ಕಾರ ನಡೆಯಲಿದೆ.

ಮಧ್ಯಾಹ್ನ ಮಹಾಪೂಜೆ, ಮಹಾ ಅನ್ನಸಂತರ್ಪಣೆ ಬಳಿಕ ತಾಳನಿನಾದಂ ಭಜನಾ ತಂಡ ಪಡಿನಂಗಡಿ ಇವರಿಂದ ಕುಣಿತ ಭಜನೆ ನಡೆಯಲಿದೆ. ಅಪರಾಹ್ನ ಕುಣಿತ ಭಜನೆ, ಚೆಂಡೆವಾದನ ಗೊಂಬೆ ಕುಣಿತ, ಬ್ಯಾಂಡ್ ವಾದನ ಸೇರಿದಂತೆ ವಿಶೇಷ ಆಕರ್ಷಣೆಯೊಂದಿಗೆ ಶ್ರೀ ಶಾರದಾ ದೇವಿಯ ಶೋಭಾಯಾತ್ರೆ ನಡೆಯ ಬೊಮ್ಮಣಮಜಲು ಹೊಳೆಯಲ್ಲಿ ಜಲಸ್ಥಂಭನ ನಡೆಯಲಿದೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!