
ಅಮರಮುಡ್ನೂರು ಗ್ರಾಮ ಪಂಚಾಯತ್ ವತಿಯಿಂದ ಸ್ವಚ್ಚತಾ ಹೀ ಸೇವಾ ಮತ್ತು ಗಾಂಧಿ ಜಯಂತಿ ಆಚರಣೆಯ ಪ್ರಯುಕ್ತ ಪಂಚಾಯತ್ ಸ್ವಚ್ಚ ಸಂಕೀರ್ಣ ಘಟಕದ ಕಾರ್ಮಿಕರನ್ನು ಹಾಗೂ ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳನ್ನು ಸನ್ಮಾನಿಸಲಾಯಿತು.
ಪಂಚಾಯತ್ ಅಧ್ಯಕ್ಷೆ ಪದ್ಮ ಪ್ರಿಯಾ ಮೇಲ್ತೋಟ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಪಂಚಾಯತ್ ಸದಸ್ಯರು ಹಾಗೂ ಪಿ.ಡಿ.ಒ ಆಕಾಶ್ ಮತ್ತು ಸಿಬ್ಬಂದಿ ವರ್ಗದವರು, ಆಶಾ ಕಾರ್ಯಕರ್ತೆಯರು, ಆರೋಗ್ಯ ಸಹಾಯಕಿಯರು ಉಪಸ್ಥಿತರಿದ್ದರು.