ಸುಳ್ಯ ನಾಡ ಹಬ್ಬಗಳ ದಿನಾಚರಣಾ ಸಮಿತಿ,
ತಾಲೂಕು ಆಡಳಿತ ಇದರ ಆಶ್ರಯದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಸಮಾರಂಭವು ಅ.9ರಂದು ಬೆಳಗ್ಗೆ 10:30 ಕ್ಕೆ ಸುಳ್ಯ ತಾಲೂಕು ಪಂಚಾಯತ್ ” ಸಾಮರ್ಥ್ಯ ಸೌಧದಲ್ಲಿ ನಡೆಯಲಿದೆ.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೀನುಗಾರಿಕೆ, ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ ವಹಿಸಲಿದ್ದಾರೆ.
ಉದ್ಘಾಟನೆಯನ್ನು ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ವಿನಯ್ ಕುಮಾರ್ ಕಂದಡ್ಕ ನೆರವೇರಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಮೀನುಗಾರಿಕೆ ಅಭಿವೃದ್ಧಿ ನಿಗಮ ನಿಯಮಿತ ಅಧ್ಯಕ್ಷ ಎ. ವಿ. ತೀರ್ಥರಾಮ ಹಾಗೂ ಕರ್ನಾಟಕ ಅರೆಭಾಷೆ ಸಾಹಿತ್ಯ ಸಂಸ್ಕೃತಿ ಅಕಾಡೆಮಿ ಅಧ್ಯಕ್ಷ ಲಕ್ಷೀ ನಾರಾಯಣ ಕಜೆಗದ್ದೆ ಭಾಗವಹಿಸಲಿದ್ದಾರೆ.
ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕುರಿತು ಉಪನ್ಯಾಸ ಕಾರ್ಯಕ್ರಮವನ್ನು ಸುಳ್ಯ ಪ್ರಾಧ್ಯಪಕರು ಮತ್ತು ವ್ಯಕ್ತಿತ್ವ ವಿಕಸನ ತರಬೇತುದಾರರು ಡಾ. ಅನುರಾಧ ಕುರುಂಜಿ ನಡೆಸಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಮಹಾದೇವ ಎಸ್. ಪಿ, ಸುಳ್ಯ ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಣಾಧಿಕಾರಿ ಭವಾನಿಶಂಕರ್ ಎನ್, ತಹಶೀಲ್ದಾರ್ ಅನಿತಾಲಕ್ಷ್ಮೀ ಎಸ್. ಹಾಗೂ ಸುಳ್ಯ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರವಿಕುಮಾರ್ ಸಿ.ಆರ್. ಉಪಸ್ಥಿತರಿರಲಿದ್ದಾರೆ.