Ad Widget

ಅ.16 : ಕನಕಮಜಲು ಪ್ರಾ.ಕೃ.ಪ. ಸಹಕಾರಿ ಸಂಘದ ಶತಮಾನೋತ್ಸವ ಕಾರ್ಯಕ್ರಮ

. . . . . .

ನೂರು ವರ್ಷಗಳನ್ನು ದಾಟಿ ಅಭಿವೃದ್ಧಿ ಪಥದಲ್ಲಿ ಮುನ್ನಡೆಯುತ್ತಿರುವ ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಶತಮಾನೋತ್ಸವ ಸಮಾರಂಭ ಹಾಗೂ ಅಡ್ಕಾರಿನಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಗೋದಾಮು ಕಟ್ಟಡದ ಉದ್ಘಾಟನೆ ಕಾರ್ಯಕ್ರಮ ಅ 16 ರಂದು ಜಾಲ್ಸೂರು ಗ್ರಾಮದ ಅಡ್ಕಾರಿನಲ್ಲಿ ನಡೆಯಲಿದೆ ಎಂದು ಸಹಕಾರ ಸಂಘದ ಅಧ್ಯಕ್ಷ ಡಾ .ಗೋಪಾಲಕೃಷ್ಣ ಭಟ್ ಅವರು ತಿಳಿಸಿದ್ದಾರೆ.
ಅವರು ಸುಳ್ಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.


ಕನಕಮಜಲು ಪ್ರಾ.ಕೃ. ಪ.ಸ.ಸಂಘವು 1918 ರಲ್ಲಿ ಸ್ಥಾಪನೆಗೊಂಡಿತ್ತು . ಮೊದಲಿಗೆ ಜಾಲ್ಸೂರು ಹಾಗೂ ಕನಕಮಜಲಿನಲ್ಲಿ ಪ್ರತ್ಯೇಕ ಪ್ರತ್ಯೇಕವಾಗಿ ಸಂಘವು ಸ್ಥಾಪನೆಗೊಂಡಿದ್ದು , ನಂತರದ ದಿನಗಳಲ್ಲಿ ಎರಡೂ ಸಹಕಾರಿ ಸಂಘಗಳು ವಿಲೀನಗೊಂಡು ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ . ಜಾಲ್ಸೂರು ಎಂದು ನಾಮಕರಣಗೊಂಡಿದ್ದು , ಸಂಘವು ಈಗ ಶತಮಾನದ ಸಂಭ್ರಮದಲ್ಲಿದೆ ಎಂದರು.

ಅ.16 ರಂದು ಕನಕಮಜಲಿನ ಪ್ರಧಾನ ಕಛೇರಿಯಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ ಅವರು ಧ್ವಜಾರೋಹ ನೆರವೇರಿಸಲಿದ್ದಾರೆ . ಅಡ್ಕಾರು ನೂತನ ಗೋದಾಮು ಕಟ್ಟಡವನ್ನು ಸಹಕಾರ ರತ್ನ ಡಾ . ಎಂ.ಎನ್ . ರಾಜೇಂದ್ರ ಕುಮಾರ್ ಅವರು ಉದ್ಘಾಟಿಸಲಿದ್ದಾರೆ. ಸಭಾ ಕಾರ್ಯಕ್ರಮವನ್ನು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಅವರು ಉದ್ಘಾಟಿಸಲಿದ್ದಾರೆ. ಮೀನುಗಾರಿಕೆ,ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್ . ಅಂಗಾರ ಅವರು ಅಧ್ಯಕ್ಷತೆ ವಹಿಸಲಿದ್ದಾರೆ . ಸಂಸದ ನಳಿನ್ ಕುಮಾರ್ ಕಟೀಲು ಅವರು ಸ್ಮರಣ ಸಂಚಿಕೆ ಬಿಡುಗಡೆಗೊಳಿಸಲಿದ್ದಾರೆ . ಅಪರಾಹ್ನ ಸಮಾರೋಪ ಸಮಾರಂಭ ನಡೆಯಲಿದ್ದು , ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ , ಸಚಿವ ಕೋಟ ಶ್ರೀನಿವಾಸ ಪೂಜಾರಿ , ಸೇರಿದಂತೆ ಇತರ ಅತಿಥಿಗಳು ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದರು. ಸಹಕಾರ ಸಂಘದ ಉಪಾಧ್ಯಕ್ಷ ನಾರಾಯಣ ಬೊಮ್ಮೆಟ್ಟಿ , ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲೋಹಿತ್ ಕುಮಾರ್ ಕುದ್ಕುಳಿ , ನಿರ್ದೇಶಕರುಗಳಾದ ಕರುಣಾಕರ ರೈ ಕುಕ್ಕಂದೂರು , ಗಣೇಶ್ ಅಂಬಾಡಿಮೂಲೆ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!