ಗ್ರಾಮೀಣ ಪ್ರದೇಶದಲ್ಲಿನ ವಿದ್ಯುತ್ ಸಮಸ್ಯೆಗಳನ್ನು ಪರಿಹರಿಸಲು ಪ್ರತಿ ತಿಂಗಳ 3ನೇ ಶನಿವಾರ “ವಿದ್ಯುತ್ ಅದಾಲತ್” ನಡೆಸುವಂತೆ ಸರಕಾರ ಆದೇಶಿಸಿದೆ. ಅದರಂತೆ ಈ ತಿಂಗಳ ವಿದ್ಯುತ್ ಅದಾಲತ್ ಅ.15 ರಂದು ಪೂರ್ವಾಹ್ನ 11.00 ಗಂಟೆಗೆ ನೆಲ್ಲೂರು ಕೆಮ್ರಾಜೆ ಗ್ರಾಮ ಪಂಚಾಯತ್ ವಠಾರದಲ್ಲಿ ವಿದ್ಯುತ್ ಅದಾಲತ್ ನಡೆಸಲು ತಿರ್ಮಾನಿಸಲಾಗಿದೆ. ಈ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಡುವ ಹಳ್ಳಿಗಳ ವಿದ್ಯುತ್ ಗ್ರಾಹಕರು ವಿದ್ಯುತ್ ಅದಾಲತ್ ಸದುಪಯೋಗ ಪಡೆದುಕೊಳ್ಳಬಹುದು ಮೆಸ್ಕಾಂ ನ ಸುಬ್ರಹ್ಮಣ್ಯ ಉಪವಿಭಾಗ ಪ್ರಕಟಣೆಯಲ್ಲಿ ತಿಳಿಸಿದೆ.