ಕರ್ನಾಟಕ ಸರ್ಕಾರ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಸುಳ್ಯ, ಸ್ತ್ರೀಶಕ್ತಿ ಬ್ಲಾಕ್ ಸೊಸೈಟಿ ಸುಳ್ಯ, ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ ಸುಳ್ಯ ಇವುಗಳ ಸಂಯುಕ್ತಾಶ್ರಯದಲ್ಲಿ ತಾಲೂಕು ಸ್ತ್ರೀಶಕ್ತಿ ಸಭಾಭವನ ಸುಳ್ಯ ಇಲ್ಲಿ ಸ್ತ್ರೀಶಕ್ತಿ ಬ್ಲಾಕ್ ಸೊಸೈಟಿ ಸುಳ್ಯ ಇದರ ಅಧ್ಯಕ್ಷರಾದ ಶ್ರೀಮತಿ ರಾಜೀವಿ ಇವರ ಅಧ್ಯಕ್ಷತೆಯಲ್ಲಿ ನಡೆದ “ತಾಲೂಕು ಮಟ್ಟದ ಪೋಷಣ್ ಮಾಸಾಚರಣೆ ಕಾರ್ಯಕ್ರಮದ ಸಮಾರೋಪ ಸಮಾರಂಭವನ್ನು ಕುಮಾರಿ ಆರ್ಪಿತಾ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳು ತಾಲೂಕು ಕಾನೂನು ಸೇವೆಗಳ ಸಮಿತಿ ಸುಳ್ಯ ಇವರು ಉದ್ಘಾಟಿಸಿ ಶುಭ ಹಾರೈಸಿದರು.
ಮುಖ್ಯ ಅತಿಥಿಗಳಾಗಿ ಶ್ರೀ ಭವಾನಿಶಂಕರ್ ಎಂ. ಕಾರ್ಯನಿರ್ವಾಹಣಾಧಿಕಾರಿಗಳು ಸುಳ್ಯ ಇವರು ಭಾಗವಹಿಸಿ, ಎನ್.ಆರ್.ಎಲ್.ಎಂ. ಮತ್ತು ಸಂಜೀವಿನಿ ಒಕ್ಕೂಟದ ಬಗ್ಗೆ ಮಾಹಿತಿ ನೀಡಿ, ಎನ್.ಆರ್.ಇ.ಜಿ. ಯೋಜನೆಯಡಿ ಹೆಚ್ಚೆಚ್ಚು ಪೌಷ್ಟಿಕ ಕೈತೋಟ ನಿರ್ಮಾಣ ಮಾಡಲು ಕರೆ ನೀಡಿದರು. ಇನ್ನೋರ್ವ ಮುಖ್ಯ ಅತಿಥಿಯಾಗಿದ್ದ ನಾರಾಯಣ ಕೆ. ಅಧ್ಯಕ್ಷರು ವಕೀಲರ ಸಂಘ ಸುಳ್ಯ ಇವರು ಮಾತನಾಡಿ ಪೋಷಣೆ ಮಾಸಾಚರಣೆಯ ಧೈಯೋದ್ದೇಶಗಳನ್ನು ಉಲ್ಲೇಖಿಸಿ ಸ್ವಾತಂತ್ರ್ಯದ ಶತಮಾನೋತ್ಸವದ ಸಂದರ್ಭದಲ್ಲಿ ಅಪೌಷ್ಟಿಕ ಮುಖ್ಯ ಭಾರತ ನಿರ್ಮಾಣ ಮಾಡುವಲ್ಲಿ ಕೈಜೋಡಿಸಬೇಕೆಂದು ಕರೆ ನೀಡಿದರು, ಉಳಿದಂತೆ ಜನಾರ್ಧನ ಬಿ. ಸಹಾಯಕ ಸರಕಾರಿ ಅಭಿಯೋಜಕರು ಸುಳ್ಯ ಇವರು ವೇದಿಕೆಯಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಶಿಶು ಅಭಿವೃದ್ಧಿ ಯೋಜನಾಧಿಕಾರಿಯವರು ಶ್ರೀಮತಿ ರಶ್ಮಿ ಕೆ.ಯಂ. ಇವರು ಪ್ರಸ್ತಾವಿಕವಾಗಿ ಮಾತನಾಡಿ ಸಪ್ಟೆಂಬರ್ ತಿಂಗಳಿನಲ್ಲಿ ನಡೆದ ಪೋಷಣೆ ಮಾಸಾಚರಣೆಯು ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಹಾಗೂ ಗ್ರಾಮ ಪಂಚಾಯತ್ಗಳಲ್ಲಿ ಯಶಸ್ವಿಯಾಗಿ ನಡೆದಿದ್ದು, ಸಹಕರಿಸಿದ ಕಛೇರಿಯ ಎಲ್ಲಾ ಮೇಲ್ವಿಚಾರಕರಿಗೆ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಅಭಿನಂದನೆ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಕೃಷಿ ತಾಂತ್ರಿಕ ಅಧಿಕಾರಿ ಶ್ರೀ ನಾಗರಾಜ್ ಬಿ. ಇವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಕೃಷಿಯಲ್ಲಿ ಆಧುನೀಕರಣ ಮತ್ತು ಕೃಷಿ ಇಲಾಖೆ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಶಿಶು ಅಭಿವೃದ್ಧಿ ಯೋಜನೆಯ ಮೇಲ್ವಿಚಾರಕಿ ವಿಜಯ ಮತ್ತು ಸ್ತ್ರೀಶಕ್ತಿ ಬ್ಲಾಕ್ ಸೊಸೈಟಿ ಸದಸ್ಯೆ ಉಷಾ ಕಣಕ್ಕೂರು ಕಾರ್ಯಕ್ರಮ ನಿರೂಪಿಸಿ, ಸ್ತ್ರೀಶಕ್ತಿ ಬ್ಲಾಕ್ ಸೊಸೈಟಿ ಕಾರ್ಯದರ್ಶಿ ಶ್ರೀಮತಿ ದಿವ್ಯ ವಿಶ್ವನಾಥ್ ದೇವರಗುಂಡ ಸ್ವಾಗತಿಸಿದರು. ಶ್ರೀಮತಿ ರೇಖಾ ಕೆ. ಚೊಕ್ಕಾಡಿ ಪ್ರಾರ್ಥಿಸಿದರು. ಹಾಗೂ ಕಾರ್ಯಕ್ರಮದ ಕೊನೆಯಲ್ಲಿ ಶ್ರೀಮತಿ ಆಶಾ ರೈ ವಂದಿಸಿದರು.