ಗುತ್ತಿಗಾರು ಸ.ಪ.ಪೂ.ಕಾಲೇಜಿನ ಹೈಸ್ಕೂಲ್ ವಿಭಾಗ ಪ್ರಾರಂಭವಾಗಿ 50 ವರ್ಷ ಪೂರೈಸಿ ಸುವರ್ಣ ಮಹೋತ್ಸವದ ಸಂಭ್ರಮದಲ್ಲಿರುವ ಹಿನ್ನೆಲೆಯಲ್ಲಿ ಸಚಿವರಾದ ಎಸ್. ಅಂಗಾರರವರು ಶಾಲಾ ರಸ್ತೆಯ ಕಾಂಕ್ರೀಟ್ ಕಾಮಗಾರಿಗೆ ರೂ.5 ಲಕ್ಷ ಅನುದಾನ ಒದಗಿಸಿದ್ದು ಇಂದು ಅವರು ಗುದ್ದಲಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ತಾ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್. ಭವಾನಿಶಂಕರ್, ಶಾಲಾ ಸುವರ್ಣಮಹೋತ್ಸವ ಸಮಿತಿ ಅಧ್ಯಕ್ಷ ದಯಾನಂದ ಮುತ್ಲಾಜೆ, ಎಸ್.ಡಿ.ಎಂ.ಸಿ. ಅಧ್ಯಕ್ಷ ಲೋಕೇಶ್ವರ ಡಿ.ಆರ್., ಗುತ್ತಿಗಾರು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ, ತಾ.ಪಂ.ಮಾಜಿ ಅಧ್ಯಕ್ಷ ಮುಳಿಯ ಕೇಶವ ಭಟ್, ಗ್ರಾ.ಪಂ.ಮಾಜಿ ಅಧ್ಯಕ್ಷ ವೆಂಕಟ್ ವಳಲಂಬೆ,ಗ್ರಾ.ಪಂ.ಅಧ್ಯಕ್ಷೆ ರೇವತಿ ಆಚಳ್ಳಿ, ಗ್ರಾ.ಪಂ.ಸದಸ್ಯ ಮಾಯಿಲಪ್ಪ ಕೊಂಬೊಟ್ಟು, ಪ್ರಾಂಶುಪಾಲೆ ಶ್ರೀಮತಿ ಚೆನ್ನಮ್ಮ, ಮುಖ್ಯ ಶಿಕ್ಷಕ ನೆಲ್ಸನ್ ಕ್ಯಾಸ್ಟಾಲಿನೋ, ಗ್ರಾ.ಪಂ.ಮಾಜಿ ಸದಸ್ಯರಾದ ಜಯಪ್ರಕಾಶ್ ಮೊಗ್ರ, ಗುತ್ತಿಗೆದಾರ ನವೀನ್ ಸುಳ್ಳಿ, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.