ಸುಮಾರು ರೂ.10 ಲಕ್ಷ ವೆಚ್ಚದಲ್ಲಿ ಕಾಂಕ್ರೀಟೀಕರಣಗೊಂಡ ಸುಳ್ಯ ತಾಲೂಕಿನ ಕಂದ್ರಪ್ಪಾಡಿ – ವಾಲ್ತಾಜೆ ಎಸ್.ಸಿ. ಕಾಲೋನಿ ರಸ್ತೆಯನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ದ.ಕ. ಜಿಲ್ಲಾ ಬಿ.ಜೆ.ಪಿ. ಉಪಾಧ್ಯಕ್ಷರಾದ ವೆಂಕಟ್ ವಳಲಂಬೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ, ಕೇಂದ್ರ ರಬ್ಬರ್ ಮಂಡಳಿ ನಿರ್ದೇಶಕರಾದ ಮುಳಿಯ ಕೇಶವ ಭಟ್, ಗುತ್ತಿಗಾರು ಪ್ರಾ. ಕೃ.ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ವೆಂಕಟ್ ದಂಬೆಕೋಡಿ, ತಾ.ಪಂ.ಮಾಜಿ ಸದಸ್ಯೆ ಯಶೋಧ ಬಾಳೆಗುಡ್ಡೆ, ಗ್ರಾ.ಪಂ.ಮಾಜಿ ಉಪಾಧ್ಯಕ್ಷ ಕೃಷ್ಣಯ್ಯ ಮೂಲೆತೋಟ, ದೇವಚಳ್ಳ ಗ್ರಾ.ಪಂ.ಸದಸ್ಯರಾದ ಭವಾನಿಶಂಕರ್ ಮುಂಡೋಡಿ,ರಮೇಶ್ ಪಡ್ಪು, ಗುತ್ತಿಗಾರು ಸೊಸೈಟಿ ಉಪಾಧ್ಯಕ್ಷ ಕಿಶೋರ್ ಅಂಬೆಕಲ್ಲು, ಪ್ರಮುಖರಾದ ಕಾಳಿಕಾ ಪ್ರಸಾದ್ ಮುಂಡೋಡಿ, ದಯಾನಂದ ಮುತ್ಲಾಜೆ,ಮಹಾಬಲ ಮುಂಡೋಡಿ, ಅಮರ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಚಂದ್ರಶೇಖರ ಕಡೋಡಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.