


ಸುಳ್ಯ ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಗುಂಪು ಸ್ಪರ್ಧೆಯಲ್ಲಿ ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕದ ವಿದ್ಯಾರ್ಥಿಗಳಾದ 10ನೇ ತರಗತಿಯ ಯಶ್ವಿತ್ ಎಸ್. ಮತ್ತು 9ನೇ ತರಗತಿಯ ಮನ್ವಿತ್ ಎಂ.ಪಿ. ಅವರು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರಿಗೆ ವಿಜ್ಞಾನ ಶಿಕ್ಷಕಿ ಸಂಧ್ಯಾಕುಮಾರಿಯವರು ಮಾರ್ಗದರ್ಶನ ನೀಡಿರುತ್ತಾರೆ.