ಗುತ್ತಿಗಾರು ಗ್ರಾಮ ಪಂಚಾಯತ್ ನಲ್ಲಿ ಅ.28 ರಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ನಾಟಕ ಸರ್ಕಾರ ಮಾತಾಡ್ ಮಾತಾಡು ಕನ್ನಡ, 67ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ನನ್ನ ನಾಡು ನನ್ನ ಹಾಡು ಕೋಟಿ ಕಂಠ ಗಾಯನ ಕಾರ್ಯಕ್ರಮ ನಡೆಯಿತು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ರೇವತಿ ಆಚಳ್ಳಿ ಸಂಕಲ್ಪ ವಿಧಿ ಭೋದಿಸಿದರು.ಗ್ರಾಮ ಪಂಚಾಯತ್ ಸದಸ್ಯರುಗಳು, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಧನಪತಿ ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿವರ್ಗ, ಗ್ರಂಥಾಲಯ ಮೇಲ್ವಿಚಾರಕರು ಸೇರಿದಂತೆ ಸಂಜೀವಿನಿ ಒಕ್ಕೂಟದ ಎಂ.ಬಿ.ಕೆ, ಎಲ್.ಸಿ.ಆರ್.ಪಿ ಗಳು ಹಾಗೂ ಸದಸ್ಯರು ಭಾಗವಹಿಸಿದ್ದರು.
ವರದಿ :- ಉಲ್ಲಾಸ್ ಕಜ್ಜೋಡಿ