ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ದ.ಕ ಜಿಲ್ಲಾ ಪಂಚಾಯತ್ ಹಾಗೂ ಅನುಷ್ಟಾನ ಬೆಂಬಲ ಸಂಸ್ಥೆ ಗ್ರಾಮ್ಸ್ ಮಂಗಳೂರು ಇವರ ಸಹಯೋಗದಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ನಲ್ಲಿ ಅ.28 ರಂದು ಮಳೆ ನೀರು ಕೊಯ್ಲು ಮತ್ತು ಬೂದು ನೀರು ನಿರ್ವಹಣೆ ಬಗ್ಗೆ ತರಬೇತಿ ಕಾರ್ಯಗಾರ ನಡೆಯಿತು.
ಈ ತರಬೇತಿಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಯಂತ ಬಾಳುಗೋಡು, ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ವಿಜಯ ಕುಮಾರ್ ಅಂಙಣ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಮಣಿಯಾನ, ಗ್ರಾಮ ಪಂಚಾಯತ್ ಸದಸ್ಯರುಗಳು, ಸ್ವಸಹಾಯ ಸಂಘದ ಸದಸ್ಯರುಗಳು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಸೇರಿದಂತೆ ಒಟ್ಟು 40 ಜನರು ತರಬೇತಿ ಕಾರ್ಯಗಾರದಲ್ಲಿ ಭಾಗವಹಿಸಿದ್ದರು. ಜಲ ಜೀವನ್ ಮಿಷನ್ ನ ಐ.ಇ.ಸಿ ಸಂಯೋಜಕರಾದ ಸುರೇಶ್ ಹಾಗೂ ಅಭಿಲಾಷ್ ಮಳೆ ನೀರು ಕೊಯ್ಲು ಮತ್ತು ಬೂದು ನೀರು ನಿರ್ವಹಣೆ ಬಗ್ಗೆ ಮಾಹಿತಿ ನೀಡಿದರು. ಅನುಷ್ಟಾನ ಬೆಂಬಲ ಸಂಸ್ಥೆಯ ಸಿಬ್ಬಂದಿ ಘೋಷಿತ್ ಕಾರ್ಯಕ್ರಮವನ್ನು ಆಯೋಜಿಸಿ ಯಶಸ್ವಿಗೊಳಿಸಿದರು.
ವರದಿ :- ಉಲ್ಲಾಸ್ ಕಜ್ಜೋಡಿ