
ಸುಬ್ರಹ್ಮಣ್ಯ ಗ್ರಾ.ಪಂ. ಸದಸ್ಯೆ ಐನೆಕಿದು ಗ್ರಾಮದ ಮೂಕಮಲೆ ಮನೆಯ ಶಶಿಕಾಂತ್ ಎಂಬವರ ಪತ್ನಿ ಭಾರತಿ ಮೂಕಮಲೆ (33) ಎಂಬವರು ಅ.29 ರಂದು ಕಾಣೆಯಾಗಿರುವುದಾಗಿ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಭಾರತಿಯವರ ಪತಿ ದೂರು ನೀಡಿದ್ದು, ಪತ್ನಿ ಅ.29 ಮಧ್ಯಾಹ್ನ ತನಕ ಕೆಲಸಕ್ಕೆ ಹೋಗಿ ಬಳಿಕ ಮರಳಿ ಮನೆಗೆ ಹೋಗಿ ತಾಯಿ ಸರಸ್ವತಿ ಹಾಗೂ ಅತ್ತೆ ಭವಾನಿ ಯವರ ಚಿಕಿತ್ಸೆಗೆ ಸಂಬಂಧಿಸಿ ಕಾಣಿಯೂರು ಆಸ್ಪತ್ರೆಗೆ ಹೋಗಿದ್ದು, ಅಲ್ಲಿ ಪತಿಯ ತಾಯಿ ಮತ್ತು ಅತ್ತೆಗೆ ಚಿಕಿತ್ಸೆ ಕೊಡಿಸಿ ಬಂದಿದ್ದು ವಾಪಸ್ಸು ಮನೆಗೆ ಬಂದಿಲ್ಲ. ಸಂಬಂಧಿಕರಲ್ಲಿ ವಿಚಾರಿಸಿದಾಗ ಎಲ್ಲಿಯೂ ಪತ್ತೆಯಾಗಿಲ್ಲ. ಆಕೆಯ ಮೊಬೈಲ್ ಪೋನ್‌ಗೆ ಕರೆ ಮಾಡಿದಾಗ ಪೋನ್ ಸ್ವಿಚ್ ಆಪ್ ಆಗಿರುತದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ನಾಪತ್ತೆಯಾಗಿರುವ ಭಾರತಿಯವರು ಈಶ್ವರಮಂಗಲದ ವ್ಯಕ್ತಿಯೋರ್ವರನ್ನು ಕಾಣಲು ಬೆಂಗಳೂರಿಗೆ ತೆರಳಿದ್ದಾರೆಂದು ತಿಳಿದುಬಂದಿದೆ.