
ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಎನ್.ಎಸ್.ಎಸ್. ಘಟಕ, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಘಟಕ ಹಾಗೂ ಮಹಿಳಾ ಸುರಕ್ಷಾ ಘಟಕ ವತಿಯಿಂದ ಮಹಿಳೆಯರಿಗೆ ಸ್ವಯಂ ರಕ್ಷಣಾ ತರಬೇತಿ ಕಾರ್ಯಕ್ರಮ “ಸ್ವರಕ್ಷ” ನ.2ರಂದು ಕಾಲೇಜಿನ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಸ್ವರಕ್ಷಣಾ ಮಹಿಳಾ ಟ್ರಸ್ಟ್ ಇದರ ಸಿ.ಇ.ಒ. ಕಾರ್ತಿಕ್ ಎಸ್. ಕಟೀಲ್ ಹಾಗು ಶ್ರೀಮತಿ ಶೋಭಲತಾ ಇವರು ವಿದ್ಯಾರ್ಥಿಗಳಿಗೆ ಸ್ವರಕ್ಷಣಾ ತರಬೇತಿಯನ್ನು ನೀಡಿದರು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಡೀನ್-ಅಕಾಡೆಮಿಕ್ ಹಾಗೂ ಮೆಕ್ಯಾನಿಕ್ ಇಂಜಿಯರಿಂಗ್ ವಿಭಾಗದ ಮುಖ್ಯಸ್ಥರು ಡಾ. ಉಮಾಶಂಕರ್ ಕೆ.ಎಸ್. ಇಂದಿನ ದಿನಗಳಲ್ಲಿ ವಿದ್ಯಾರ್ಥಿಗಳ ಭದ್ರತೆಯ ದೃಷ್ಠಿಯಿಂದ ಸ್ವಯಂ ರಕ್ಷಣೆ ಅನಿವಾರ್ಯವೆನಿಸಿದೆ. ಸರಕಾರ ಮತ್ತು ಪೋಲಿಸ್ ಇಲಾಖೆ ವಿವಿಧ ಕ್ರಮಗಳನ್ನು ಕೈಗೊಂಡರೂ ಹಲವೆಡೆ ಮಹಿಳೆಯರು ಮಾನಸಿಕ ಹಾಗೂ ದೈಹಿಕ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಇಂತಹ ಸಮಸ್ಯೆಯಿಂದ ಹೊರಬರಲು ಸ್ವರಕ್ಷ ಕ್ರಮಗಳ ಬಗ್ಗೆ ತಿಳಿದುಕೊಳ್ಳಬೇಕು ಎಂದರು. ಸ್ವರಕ್ಷ ತರಬೇತುದಾರ ಕಾರ್ತಿಕ್ ಎಸ್. ಕಟೀಲ್ ಮಾತನಾಡಿ ಮಾನಸಿಕ ಮತ್ತು ದೈಹಿಕ ಕಿರುಕುಳಗಳನ್ನು ಸಮರ್ಥವಾಗಿ ಎದುರಿಸುವ ವಿವಿಧ ಕೌಶಲ್ಯಗಳನ್ನು ವಿದ್ಯಾರ್ಥಿಗಳಿಗೆ ಹಾಗೂ ನೆರೆದ ಸಿಬ್ಬಂದಿಗಳಿಗೆ ಪ್ರಾತ್ಯಕ್ಷಿತೆ ಮುಖಾಂತರ ತಿಳಿಸಿಕೊಟ್ಟರು.
ಸಿವಿಲ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು ಹಾಗೂ ಸ್ಟೆಪ್ ಡೈರೆಕ್ಟರ್ ಡಾ. ಚಂದ್ರಶೇಖರ್ ಎ., ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿಭಾಗದ ಪ್ರೊಫೆಸರ್ ಡಾ. ಸ್ಮಿತಾ ಎಂ.ಎಲ್., ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥರು ಡಾ. ಸುರೇಖ ಎಂ., ಟ್ರೆöನಿಂಗ್ & ಪ್ಲೇಸ್‌ಮೆ೦ಟ್ ಆಫೀಸರ್ ಪ್ರೊಫೆಸರ್ ಅನಿಲ್ ಬಿ.ವಿ., ಡೈರೆಕ್ಟರ್ ಆಫ್ ಪಿ.ಜಿ. ಸ್ಟಡೀಸ್
ಡಾ. ಸವಿತಾ ಎಂ., ಎನ್.ಎಸ್.ಎಸ್. ಘಟಕಾಧಿಕಾರಿ ಹಾಗೂ ವಿದ್ಯಾರ್ಥಿನಿಯರ ಕ್ಷೇಮಾಧಿಕಾರಿಯಾದ ಡಾ. ಪ್ರಜ್ಞಾ ಎಂ.ಆರ್., ವಿದ್ಯಾರ್ಥಿ ಕ್ಷೇಮಾಧಿಕಾರಿಯಾದ ಪ್ರೊ. ಲೋಕೇಶ್ ಪಿ.ಸಿ. ಮತ್ತು ಎಲ್ಲಾ ಮಹಿಳಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಮಹಿಳಾ ಗ್ರೀವೆನ್ಸ್ ಘಟಕದ ಸಂಚಾಲಕಿ ಹಾಗೂ ಡೀನ್-ಹಾಸ್ಟೆಲ್ ಡಾ. ಭಾಗ್ಯ ಹೆಚ್.ಕೆ., ಸ್ವಾಗತಿಸಿ, ಡೀನ್-ರೀಸರ್ಚ್ ಡಾ. ಸವಿತಾ ಸಿ.ಕೆ., ಮುಖ್ಯ ಅತಿಥಿಗಳನ್ನು ಪರಿಚಯಿಸಿದರು, ಕು. ಹೃತಿಕ್ಷಾ ಕಾರ್ಯಕ್ರಮವನ್ನು ನಿರೂಪಿಸಿದರು.