ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯದ ಗೂನಡ್ಕದಲ್ಲಿ ಮತ್ತೊಬ್ಬ ವ್ಯಕ್ತಿಯನ್ನು ಎನ್ಐಎ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ವಶಕ್ಕೆ ಪಡೆದಾತನನ್ನು ಗೂನಡ್ಕದ ಸಾಜಿದ್ ಐ ಜಿ ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮುಂಜಾನೆಯಿಂದಲೇ ಹಲವರ ಬೇಟೆಗೆ ಇಳಿದ ಎನ್ಐಎ ಪೊಲೀಸರು ಎಸ್ಡಿಪಿಐ ಪ್ರಮುಖರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.