ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಸುವಿಚರ ವೇದಿಕೆ ಸುಳ್ಯ, ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸುಳ್ಯ ಇದರ ಸಹಭಾಗಿತ್ವದಲ್ಲಿ ಕನ್ನಡ ಭವನ ಅಂಬೆಟೆಡ್ಕ, ಸುಳ್ಯ ಇಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಪ್ರಯುಕ್ತ ಹಮ್ಮಿಕೊಂಡಿದ್ದ ಸಾಹಿತ್ಯ ಸಂಭ್ರಮ 2022ರ 5ನೇ ದಿನದ ಪ್ರಯುಕ್ತ ಮಹಿಳಾ ಸಾಹಿತ್ಯ ಸಂಭ್ರಮದಲ್ಲಿ “ಜನಪದ ಸಾಹಿತ್ಯದಲ್ಲಿ ಸ್ತ್ರೀ” ಎಂಬ ವಿಷಯದ ಬಗ್ಗೆ ಉಪನ್ಯಾಸ ಕಾರ್ಯಗಾರವನ್ನು ಶಿವಣ್ಣ ಕೊಳ್ಳೆಗಾಲ ನವೆಂಬರ್ 5ರಂದು ನಡೆಸಿಕೊಟ್ಟರು. ಕಾರ್ಯಕ್ರಮದ ಉದ್ಘಾಟನೆಯನ್ನು ಭವಾನಿಶಂಕರ್ ಎನ್., ಕಾರ್ಯನಿರ್ವಹಣಾಧಿಕಾರಿಗಳು, ತಾಲೂಕು ಪಂಚಾಯತ್ ಸುಳ್ಯ
ನೆರವೇರಿಸಿ ಕಾರ್ಯಕ್ರಮದ ಬಗ್ಗೆ ಸಂತಸ ವ್ಯಕ್ತ ಪಡಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ರಾದ ಚಂದ್ರಶೇಖರ ಪೇರಾಲು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶ್ರೀಮತಿ. ರಶ್ಮಿ ಕೆ. ಎಂ., ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸುಳ್ಯ ಭಾಗವಹಿಸಿ ಶುಭ ಹಾರೈಸಿದರು. ಕಾರ್ಯಕ್ರಮದ ವೇದಿಕೆಯಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳಾದ ರಾಮಚಂದ್ರ ಪಲ್ಲತ್ತಡ್ಕ, ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕೋಶಾಧಿಕಾರಿ ದಯಾನಂದ ಆಳ್ವ, ಕಾರ್ಯದರ್ಶಿಗಳಾದ ತೇಜಸ್ವಿ ಕಡಪಳ, ಶ್ರೀಮತಿ. ಚಂದ್ರಾಮತಿ ಕೆ., ಕಾರ್ಯಕ್ರಮ ಸಂಯೋಜಕರಾದ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳಾದ ಶ್ರೀಮತಿ. ಲತಾಶ್ರೀ ಸುಪ್ರೀತ್ ಮೋಂಟಡ್ಕ, ಉಪಸ್ಥಿತರಿದ್ದರು. ಕಾರ್ಯಕ್ರಮಲ್ಲಿ ಶೈಲಜಾ ಬಿ., ಅರೆಭಾಷೆ ಅಂಕಣಕಾರ್ತಿ ಚಂದ್ರವತಿ ಬಡ್ಡಡ್ಕ, ಸುವಿಚರ ವೇದಿಕೆ ಸುಳ್ಯ ಇದರ ಕಾರ್ಯದರ್ಶಿ ಶ್ರೀಮತಿ. ಗಿರಿಜಾ ಎಃ. ವಿ., ಸುಳ್ಯ ತಾಲೂಕಿನ ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಿದ್ದರು.
ಕಸಾಪ ಗೌರವ ಕಾರ್ಯದರ್ಶಿ ತೇಜಸ್ವಿ ಕಡಪಳ ಎಲ್ಲರನ್ನು ಸ್ವಾಗತಿಸಿದರು.ಕ.ಸಾ.ಪ ನಿರ್ದೇಶಕಿ ಲತಾಶ್ರೀ ಸುಪ್ರೀತ್ ಮೋಂಟಡ್ಕ ಧನ್ಯವಾದ ಸಲ್ಲಿಸಿದರು. ಕಸಾಪ ಕಾರ್ಯದರ್ಶಿ ಚಂದ್ರಮತಿ ಕೆ. ಕಾರ್ಯಕ್ರಮ ನಿರೂಪಿಸಿದರು.