
ದಿನಾಂಕ 8 ಮತ್ತು 9 ನವೆಂಬರ್ 2022 ರಂದು ಕೆ.ಪಿ.ಎಸ್.ಬೆಳ್ಳಾರೆ ಇಲ್ಲಿ ನಡೆದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಐವರ್ನಾಡು ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿ ಬಾಲಕ ಮತ್ತು ಬಾಲಕಿಯರ ವಿಭಾಗದಲ್ಲಿ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿರುತ್ತಾರೆ. ಇದರೊಂದಿಗೆ ಬಾಲಕಿಯರ ತಂಡ ಪ್ರಶಸ್ತಿ ಹಾಗೂ ವೈಯಕ್ತಿಕ ಚಾಂಪಿಯನ್ ಶಿಪ್ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರಿಗೆ ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ಮಾಲತಿ ಬೆಳ್ಳಾರೆ ಕ್ರೀಡಾ ತರಬೇತಿ ನೀಡಿರುತ್ತಾರೆ.