ನ.26 : ಸಚಿವ ಅಂಗಾರರ ನೇತೃತ್ವದಲ್ಲಿ ಬೃಹತ್ ಉದ್ಯೋಗ ಮೇಳ

. . . . . . . . .

ಬಂದರು ಮೀನುಗಾರಿಕೆ ಮತ್ತು ಒಳನಾಡು ಜಲ ಸಾರಿಗೆ ಸಚಿವ ಎಸ್.ಅಂಗಾರ ನೇತೃತ್ವದಲ್ಲಿ ಬೃಹತ್ ಉದ್ಯೋಗ ಮೇಳ ನ.26 ರಂದು ಸುಳ್ಯದ ನೆಹರೂ ಸ್ಮಾರಕ ಮಹಾ ವಿದ್ಯಾಲಯದಲ್ಲಿ ನಡೆಯಲಿದೆ. ಸಚಿವರ ಸಹಕಾರದಲ್ಲಿ ಮಂಗಳೂರಿನ ಕೆರಿಯರ್ ಡೆಸ್ಟಿನಿ ಸಂಸ್ಥೆ ಎರಡನೇ ಬಾರಿಗೆ ಸುಳ್ಯದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಿದೆ. ಬೆಳಿಗ್ಗೆ 9 ರಿಂದ ಸಂಜೆ 6ರವರೆಗೆ ನಡೆಯುವ ಉದ್ಯೋಗ ಮೇಳದಲ್ಲಿ 40 ಕ್ಕೂ ಹೆಚ್ಚು ವಿವಿಧ ಕಂಪೆನಿಗಳು ಭಾಗವಹಿಸುವ ನಿರೀಕ್ಷೆ ಇದೆ.
ಯಾವುದೇ ಕಂಪನಿಗಳು ಉದ್ಯೋಗ ಮೇಳವನ್ನು ನೋಂದಾಯಿಸಲು ಬಯಸಿದರೆ ವಸತಿ/ಸಾರಿಗೆ ಮತ್ತು ಆಹಾರ ನೀಡಲಾಗುವುದು. ಉದ್ಯೋಗ ಬಯಸಿ ಎಸ್‌ಎಸ್‌ಎಲ್‌ಸಿ, ಪಿಯುಸಿ ಆದವರು, ಪದವಿ, ಸ್ನಾತಕೋತ್ತರ, ಐಟಿಐ, ಡಿಪ್ಲೊಮಾ, ಇಂಜಿನಿಯರಿಂಗ್ ಪದವೀಧರರು ಭಾಗವಹಿಸಬಹುದು‌. ಉಚಿತವಾಗಿ ನೊಂದಾವಣೆ ಮಾಡಿಸಿಕೊಳ್ಳಬಹುದು. ಉದ್ಯೋಗ ಮೇಳಕ್ಕೆ ಆಗಮಿಸುವವರು 10 ಪ್ರತಿ ಬಯೋಡಾಟ ತರಬೇಕು ಹೆಚ್ಚಿನ ಮಾಹಿತಿಗಾಗಿ ಕೆರಿಯರ್ ಡೆಸ್ಟಿನಿ ಮಂಗಳೂರು ಸಂಪರ್ಕಿಸಬಹುದು ಎಂದು
(ನಂ.7338676611) ಕೆರಿಯರ್ ಡೆಸ್ಟಿನಿ ಪ್ರಕಟಣೆ ತಿಳಿಸಿದೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

13.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading