ಕೆ.ವಿ.ಜಿ ಕೈಗಾರಿಕಾ ತರಬೇತಿ ಸಂಸ್ಥೆ ಸುಳ್ಯ ಇದರ ತರಬೇತಿ ಅಧಿಕಾರಿಯಾಗಿದ್ದ ದಿನೇಶ್ ಮಡ್ತಿಲ ಅವರು ಉಪಪ್ರಾಂಶುಪಾಲರಾಗಿ ನ.೭ರಂದು ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ದಿನೇಶ್ ಮಡ್ತಿಲರನ್ನು ಶಾಲು ಹೊದಿಸಿ ಸನ್ಮಾನಿಸಿ ಮಾತನಾಡಿದ ಆಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ) ಇದರ ಪ್ರಧಾನ ಕಾರ್ಯದರ್ಶಿಗಳು, ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಡಾ.ರೇಣುಕಾ ಪ್ರಸಾದ್ ಕೆ.ವಿ ಯವರು ದಿನೇಶ್ ಮಡ್ತಿಲರ ಸೇವಾನುಭಾವ ಮತ್ತು ಬದ್ಧತೆ ಹಾಗೂ ಸಂಸ್ಥೆಯ ಮೇಲಿಟ್ಟಿರುವ ನಿಷ್ಠೆ ಮತ್ತು ಅವರ ಅಪಾರ ಅನುಭವಗಳನ್ನು ಪರಿಗಣಿಸಿ ಉಪ ಪ್ರಾಂಶುಪಾಲರಾಗಿ ಭಡ್ತಿನೀಡಲಾಗಿದೆ ಎಂದರು. ಅವರ ಆಡಳಿತ ಅವಧಿಯಲ್ಲಿ ಸಂಸ್ಥೆ ಇನ್ನಷ್ಟು ಉನ್ನತ ಸ್ಥಾನಮಾನಗಳನ್ನು ಪಡೆದು ಪ್ರಗತಿಯ ಪಥದಲ್ಲಿ ಮುನ್ನಡೆಯುವಂತಾಗಲಿ ಎಂದು ಶುಭಹಾರೈಸಿದರು.
ಈ ಸಂದರ್ಭದಲ್ಲಿ ಕೆ.ವಿ.ಜಿ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯಾನಿರ್ವಹಾಣಾಧಿಕಾರಿ ಡಾ.ಉಜ್ವಲ್ ಊರುಬೈಲು, ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಸುರೇಶ್, ಕೆ.ವಿ.ಜಿ ಅಮರ ಜ್ಯೋತಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ.ಯಶೋದ ರಾಮಚಂದ್ರ, ಕೆ.ವಿ.ಜಿ ಪಾಲಿಟೆಕ್ನಿಕ್ ಪ್ರಾಂಶುಪಾಲರಾದ ಜಯಪ್ರಕಾಶ್ ಕಲ್ಲುಗದ್ದೆ, ಕೆ.ವಿ.ಜಿ ಐ.ಟಿ.ಐ ಪ್ರಾಂಶುಪಾಲರಾದ ಚಿದಾನಂದ ಗೌಡ ಬಾಳಿಲ, ಕೆ.ವಿ.ಜಿ ಐ.ಪಿ.ಎಸ್.ಪ್ರಾಂಶುಪಾಲರಾದ ಅರುಣ್ ಕುಮಾರ್, ಕೆ.ವಿ.ಜಿ ಪೂರ್ವ ಪ್ರಾಥಮಿಕ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರಾದ ಹೇಮ, ಕೆ.ವಿ.ಜಿ. ದಂತ ಮಹಾವಿದ್ಯಾಲಯದ ಆಡಳಿತ ಪರಿಷತ್ ಸದಸ್ಯರಾದ ಡಾ.ಮನೋಜ್ ಕುಮಾರ್ ಅಡ್ಡಂತಡ್ಕ, ಆಡಳಿತಾಧಿಕಾರಿ ಮಾಧವ ಬಿ.ಟಿ, ಮತ್ತು ಕೆ.ವಿ.ಜಿ ಶಿಕ್ಷಣ ಸಂಸ್ಥೆಗಳ ಉಪಪ್ರಾಂಶುಪಾಲರು, ಕಛೇರಿ ಅಧೀಕ್ಷಕರುಗಳು, ಮತ್ತು ಸಿಬ್ಬಂಧಿಗಳು ಉಪಸ್ಥಿತರಿದ್ದರು.