ಸುಳ್ಯದ ಕಲ್ಲುಗುಂಡಿ ಸಮೀಪ ಕಡಪಾಲ ಸೇತುವೆ ಬಳಿ ಲಾರಿ ಹಾಗೂ ಬಸ್ ನಡುವೆ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ಲಾರಿ ಚಾಲಕ ಮೃತಪಟ್ಟು, ಹಲವು ಪ್ರಯಾಣಿಕರು ಗಂಭೀರ ಗಾಯಗೊಂಡ ಘಟನೆ ಇಂದು ಸಂಜೆ ನಡೆದಿದೆ.
ಮೈಸೂರಿನಿಂದ ಪುತ್ತೂರು ಕಡೆಗೆ ಬರುತ್ತಿದ್ದ ಸರಕಾರಿ ಬಸ್ಗೆ ಲಾರಿ ಡಿಕ್ಕಿ ಹೊಡೆದಿರುವುದಾಗಿ ಪ್ರಯಾಣಿಕರು ಮಾಹಿತಿ ನೀಡಿದ್ದಾರೆ.ಗಾಯಾಳುಗಳನ್ನು ಅಂಬ್ಯುಲೆನ್ಸ್ನಲ್ಲಿ ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆತರಲಾಗಿದೆ. ಬಸ್ ಗೆ ಲಾರಿ ಡಿಕ್ಕಿಯಾದ ವೇಳೆ ಮಧ್ಯದಲ್ಲಿ ಸಿಲುಕಿಕೊಂಡಿದ್ದ ಲಾರಿ ಚಾಲಕನನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದರು. ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದ ಚಾಲಕ ತನ್ನ ಊರಾದ ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ತೆರಳುತ್ತಿದ್ದ ವೇಳೆ ಕುಶಾಲನಗರ ತಲುಪುವ ವೇಳೆ ಮೃತಪಟ್ಟರು ಎಂದು ತಿಳಿದುಬಂದಿದೆ.