ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾಷಷ್ಠಿ ಮಹೋತ್ಸವಕ್ಕೆ ಈ ಬಾರಿ ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿಯವರನ್ನು ದೇವಸ್ಥಾನದ ವತಿಯಿಂದ ಅಹ್ವಾನಿಸಲಾಯಿತು.
ಸಚಿವ ಎಸ್ ಅಂಗಾರ ಅವರ ನೇತೃತ್ವದಲ್ಲಿ ಭೇಟಿ ಮಾಡಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಷಷ್ಠಿ ಮಹೋತ್ಸವ ಆಮಂತ್ರಣ ನೀಡಿ ಆಮಂತ್ರಿಸಲಾಯಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ, ಸದಸ್ಯರುಗಳಾದ ಪ್ರಸನ್ನ ದರ್ಬೆ, ಮನೋಹರ ರೈ, ಮಾಸ್ಟರ್ ಪ್ಲಾನ್ ಸದಸ್ಯರಾದ ಕಿಶೋರ್ ಕುಮಾರ್ ಕೂಜುಗೋಡು, ಚಂದ್ರಶೇಖರ ನಲ್ಲೂರಾಯ, ಮನೋಜ್ ಸುಬ್ರಹ್ಮಣ್ಯ, ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ ಉಪಸ್ಥಿತರಿದ್ದರು.