
ನೆಹರು ಮೆಮೋರಿಯಲ್ ಕಾಲೇಜು ಸುಳ್ಯ, ಸಮಾಜಕಾರ್ಯ ವಿಭಾಗ ಇದರ ಸಮಾಜ ಕಾರ್ಯ ಸಂಘದ ವತಿಯಿಂದ ಸಮಾಜ ಕಾರ್ಯದಲ್ಲಿ ವೃತ್ತಿ ವ್ಯಾಪ್ತಿ ಎಂಬ ವಿಚಾರದಲ್ಲಿ ಅತಿಥಿ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನೆಹರು ಮೆಮೋರಿಯಲ್ ಕಾಲೇಜಿನ ಪ್ರಾಂಶುಪಾಲರಾದ ಪ್ರೊಫೆಸರ್ ರುದ್ರ ಕುಮಾರ್ ಎಂ. ಎಂ. ವಹಿಸಿದ್ದರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಕೆವಿಜಿ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆ ಇದರ ಮುಖ್ಯ ಮಾನವ ಸಂಪನ್ಮೂಲ ಅಧಿಕಾರಿಯಾಗಿರುವ ಶ್ರೀಯುತ ಶಿವಪ್ರಸಾದ್ ಕೆ ,ಇವರು ವಿದ್ಯಾರ್ಥಿಗಳಿಗೆ ಪ್ರಸ್ತುತ ಸಮಾಜದಲ್ಲಿ, ಸಮಾಜ ಕಾರ್ಯ ಕ್ಷೇತ್ರದಲ್ಲಿ ಮಾಡಬಹುದಾದ ವೃತ್ತಿಗಳ ಅವಕಾಶಗಳನ್ನು ಮತ್ತು ಅವುಗಳಿಗೆ ಯಾವ ರೀತಿಯಾದ ಪೂರಕ ತಯಾರಿಯನ್ನು ಮಾಡಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು. ವೇದಿಕೆಯಲ್ಲಿ ಸಮಾಜ ಕಾರ್ಯ ಸಂಘದ ಸಂಯೋಜಕರಾದ ಶೋಭಾ ಎ ಉಪಸ್ಥಿತರಿದ್ದರು. ವಿಭಾಗದ ಮುಖ್ಯಸ್ಥರಾದ ಶ್ರೀಮತಿ ಕೃಪಾ ಎ.ಎನ್ ಉಪಸ್ಥಿತರಿದ್ದು, ಅತಿಥಿಗಳನ್ನು ಸ್ವಾಗತಿಸಿ ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕ ಮಾತುಗಳನ್ನಾಡಿದರು.ಸಮಾಜ ಕಾರ್ಯ ಸಂಘದ ವಿದ್ಯಾರ್ಥಿ ಪ್ರತಿನಿಧಿ ನಿಶಾಂತ್ ಎ ಡಿ ವಂದಿಸಿ, ಕೃತಿ ಕೆ ಎಚ್ ಕಾರ್ಯಕ್ರಮವನ್ನು ನಿರೂಪಿಸಿದರು. ಸಮಾಜ ಕಾರ್ಯ ವಿಭಾಗದ ಎಲ್ಲ ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಂಡರು.
