ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಮಂಗಳೂರಿನ ಕೆರಿಯರ್ ಡೆಸ್ಟಿನಿ, ನೆಹರು ಮೆಮೋರಿಯಲ್ ಕಾಲೇಜು ಸುಳ್ಯ ಇದರ ಪ್ಲೇಸ್‌ಮೆಂಟ್ ಸೆಲ್‌ನ ಆಶ್ರಯದಲ್ಲಿ, ನೆಹರು ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿ ದಿ. 26 ರಂದು ಬೃಹತ್ ಉದ್ಯೋಗ ಮೇಳಕ್ಕೆ ಚಾಲನೆ ನೀಡಲಾಯಿತು.
ಕರ್ನಾಟಕ ರಾಜ್ಯ ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಶ್ರೀ ಎಸ್ ಅಂಗಾರ ಉದ್ಯೋಗ ಮೇಳವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ, ಗ್ರಾಮೀಣ ಭಾಗದಲ್ಲಿ ಹಮ್ಮಿಕೊಂಡಿರುವ ಈ ಉದ್ಯೋಗ ಮೇಳದ ಸಂಪೂರ್ಣ ಪ್ರಯೋಜನವನ್ನು ಯುವಜನತೆ ಪಡೆದುಕೊಂಡು, ಉತ್ತಮ ಜೀವನವನ್ನು ರೂಪಿಸಿಕೊಳ್ಳಲು ಇದೊಂದು ವೇದಿಕೆಯಾಗಲಿ ಎಂದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಅಕಾಡೆಮಿ ಅಫ್ ಲಿಬರಲ್ ಎಜುಕೇಶನ್ ಇದರ ಅಧ್ಯಕ್ಷರಾದ ಡಾ. ಕೆ.ವಿ ಚಿದಾನಂದ ಅವರು ಮಾತನಾಡಿ ಗ್ರಾಮೀಣ ಭಾಗದ ಯುವಜನತೆಗೆ ಶಿಕ್ಷಣದ ಜೊತೆಗೆ ಉದ್ಯೋಗ ಅವಕಾಶ ಸೃಷ್ಠಿಸುವುದೇ ಕೆವಿಜಿ ವಿದ್ಯಾಸಂಸ್ಥೆಗಳ ಆಶಯವಾಗಿದೆಯೆಂದರು.
ರಾಜ್ಯ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಎ.ವಿ ತೀರ್ಥರಾಮ, ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ವಿನಯ್‌ಕುಮಾರ್ ಕಂದಡ್ಕ, ಕೆರಿಯರ್ ಡೆಸ್ಟಿನಿ ಮುಖ್ಯಸ್ಥೆ ಜಯಶ್ರೀ, ಸುಳ್ಯ ನೆಹರು ಮೆಮೋರಿಯಲ್ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ರುದ್ರಕುಮಾರ್ ಎಂ.ಎಂ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಶ್ರೀಮತಿ ರತ್ನಾವತಿ ಡಿ., ನೆಹರು ಮೆಮೋರಿಯಲ್ ಕಾಲೇಜಿನ ಪ್ಲೇಸ್‌ಮೆಂಟ್ ಸೆಲ್ ನ ಅಧಿಕಾರಿ ಡಾ. ವಿಜಯಲಕ್ಷ್ಮೀ ಎಂ. ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಚಂದ್ರ ಕೋಲ್ಚಾರ್, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಶಿವಪ್ರಸಾದ್ ಕಣಿಪಿಲ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಜಂಟಿ ನಿರ್ದೇಶಕ ಅರವಿಂದ ಡಿ ಬಾಳೆರಿ, ಜಿಲ್ಲಾ ಕೌಶಲ್ಯಾಭಿವೃದ್ಧಿ ನಿಗಮದ ಅಧಿಕಾರಿ ಹೇಮಚಂದ್ರ ಎಸ್.ಜಿ, ತೆಂಗಿನ ನಾರಿನ ಅಭಿವೃದ್ಧಿ ನಿಗಮದ ಜಂಟಿ ನಿರ್ದೇಶಕ ಚಂದ್ರಶೇಖರ ದೊಡ್ಡಮನಿ, ಎಂಎಸ್‌ಎಂಐ ಜಂಟಿ ನಿರ್ದೇಶಕ ದೇವರಾಜ್ ವೇದಿಕೆಯಲ್ಲಿದ್ದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ರುದ್ರಕುಮಾರ್ ಎಂ.ಎಂ ಸ್ವಾಗತಿಸಿ, ಕನ್ನಡ ವಿಭಾಗದ ಮುಖ್ಯಸ್ಥ ಸಂಜೀವ ಕುದ್ಪಾಜೆ ವಂದಿಸಿದರು. ರಾಕೇಶ್ ರೈ ಕೆಡೆಂಜಿ ಕಾರ್ಯಕ್ರಮ ನಿರೂಪಿಸಿದರು. ೭೩ ಪ್ರತಿಷ್ಠಿತ ಕಂಪನಿಗಳಿಂದ ಸುಮಾರು ೩೦ಕ್ಕೂ ಹೆಚ್ಚು ಕೊಠಡಿಗಳಲ್ಲಿ ಸಂದರ್ಶನ ಡೆಯಿತು.
- Thursday
- November 21st, 2024