Ad Widget

ಪತ್ರಕರ್ತರ ಸಮುದಾಯ ಭವನದ ಉದ್ಘಾಟನೆ ನೆರವೇರಿಸಿದ ಸಚಿವ ಎಸ್. ಅಂಗಾರ ;
ಪತ್ರಕರ್ತರ ಕೆಲಸ ದೇಶಕಾಯುವ ಸೈನಿಕರಂತೆ – ಒಡಿಯೂರು ಶ್ರೀ

ಪತ್ರಕರ್ತರು ನಿಖರ, ನೇರ ವರದಿ ಮಾಡುವ ಮೂಲಕ ಜನರ ವಿಶ್ವಾಸ ಗಳಿಸುವ ಕೆಲಸವಾಗಬೇಕಿದೆ. ನಮ್ಮ ಸ್ಪಷ್ಟತೆ, ಉದ್ದೇಶದಲ್ಲಿ ಯಾವುದೇ ರಾಜಿಮಾಡಿಮಾಡದೇ ನಮ್ಮ ಕೆಲಸದ ಬಗ್ಗೆ ಪ್ರಯತ್ನಿಸಿದಾಗ ಯಶಸ್ಸು ಸಾಧ್ಯ ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಹೇಳಿದರು.

. . . . . .

ಅವರು ಬುಧವಾರ ಸುಳ್ಯದ ಅಂಬಟಡ್ಕದಲ್ಲಿ ನೂತನವಾಗಿ ನಿರ್ಮಾಣಗೊಂಡ ಸುಳ್ಯ ಪ್ರೆಸ್ ಕ್ಲಬ್ ಸುಳ್ಯನ ಪತ್ರಕರ್ತರ ಸಮುದಾಯ ಭವನದ ನೆಲ ಅಂತಸ್ತನ್ನು ಉದ್ಘಾಟಿಸಿ ಮಾತನಾಡಿದರು. ಪತ್ರಕರ್ತರು ಅವಶ್ಯಕತೆಗಳ ಬಗ್ಗೆ ಗಮನಹರಿಸಬೇಕು. ಜನರಿಗೆ ಭಯ ಬರುವಂತಹ ವರದಿ ನೀಡದೇ, ಸಮಾಜವನ್ನು ತಿದ್ದುವ, ಸಮಾಜದ ಅಂಕುಡೊಂಡುಗಳನ್ನು ಹೋಗಲಾಡಿಸುವ ಕೆಲಸ ಮಾಡಿ. ಸುಳ್ಯ ಕ್ಷೇತ್ರ ಈಗಾಗಲೇ ಹಲವಾರು ರೀತಿಯಲ್ಲಿ ಅಭಿವೃದ್ಧಿ ಹೊಂದಿದೆ. ಮುಂದಕ್ಕೆ ಸುಳ್ಯಕ್ಕೆ ಜಿಲ್ಲಾ ಕೇಂದ್ರದ ಅವಶ್ಯಕತೆಯನ್ನು ನಾವು ಮಾಡಿಯೇ ಮಾಡುತ್ತೇವೆ. ನನ್ನದು ಡಂಬಾಚಾರ ಅಲ್ಲ. ಅಭಿವೃದ್ಧಿ ಕೆಲಸದಲ್ಲಿ ಜನರ ಸಹಕಾರ ಅಗತ್ಯ ಎಂದು ಸಚಿವ ಎಸ್.ಅಂಗಾರ ಹೇಳಿದರು.
ಪ್ರೆಸ್ ಕ್ಲಬ್ ಕೊಠಡಿಯನ್ನು ಉದ್ಘಾಟಿಸಿದ ಇಂಧನ ಮತ್ತು ಕನ್ನಡ ಸಂಸ್ಕೃತಿ ಸಚಿವ ವಿ.ಸುನಿಲ್ ಕುಮಾರ್ ಮಾತನಾಡಿ, ಇಂದಿನ ಬ್ರೇಕಿಂಗ್ ನ್ಯೂಸ್ ಯುಗದಲ್ಲಿ ವಾಸ್ತವ ಮರೆಮಾಚುವ ಕೆಲಸ ಆಗುತ್ತಿದೆ. ವಾಸ್ತವ ಸಂಗತಿ ಕಡಿಮೆ ಆಗಿದೆ. ಮೌಲ್ಯಾಧಾರಿತ ವರದಿಯನ್ನು ಮಾಡಿದಾಗ ಸಮಾಜ, ವ್ಯವಸ್ಥೆ ಉತ್ತಮ ಸಮಾಜ ನಿರ್ಮಾಣ ಆಗಲಿದೆ ಎಂದ ಅವರು ಪತ್ರಿಕೆಗಳಿಗೆ, ಓದುಗರು, ವಾಹಿನಿಗಳಿಗೆ ವೀಕ್ಷಕರ ಸಹಕಾರ ಅತೀ ಅಗತ್ಯ. ಆಡಳಿತವನ್ನು ಎಚ್ಚರಿಸುವ ಕೆಲಸ ಪತ್ರಿಕೆಗಳಿಂದ ನಿರಂತರವಾಗಿ ನಡೆಯಬೇಕು ಎಂದರು.
ಅತಿಥಿ ಗೃಹ ಉದ್ಘಾಟಿಸಿದ ವಿಧಾನ ಸಭೆ ವಿಪಕ್ಷ ಉಪನಾಯಕ ಯು.ಟಿ.ಖಾದರ್ ಮಾತನಾಡಿ, ಪತ್ರಕರ್ತರು ಏನು ಬರೆಯಬೇಕು ಎಂದು ಆಲೋಚಿಸದಂತೆ ಏನು ಬರೆಯಬಾರದು ಎಂಬುದನ್ನು ತಿಳಿದಿರಬೇಕು. ಹಿರಿಯ ಪತ್ರಕರ್ತರು ಯುವ ಪತ್ರಕರ್ತರಿಗೆ ಮಾರ್ಗದರ್ಶನ ನೀಡುವ ಕೆಲಸವಾಗಬೇಕಿದೆ ಎಂದರು.

ಜಿಲ್ಲಾ ಕಾರ್ಯನಿರತರ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ವಾಣಿಜ್ಯ ವಿಭಾಗ ಕಟ್ಟಡ ಉದ್ಘಾಟಿಸಿದರು. ಸುದ್ದಿ ಸಮೂಹ ಸಂಸ್ಥೆಯ ಸಂಪಾದಕ, ಆಡಳಿತ ನಿರ್ದೇಶಕ ಡಾ.ಯು.ಪಿ. ಶಿವಾನಂದ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿದರು. ನಗರ ಪಂಚಾಯಿತಿ ಅಧ್ಯಕ್ಷ ಪ್ರೆಸ್ ಕ್ಲಬ್ ನಾಮಫಲಕ ಅನಾವರಣ ಗೊಳಿಸಿದರು.
ಕೆ.ಎಫ್.ಡಿ.ಸಿ ನಿಗಮದ ಅಧ್ಯಕ್ಷ ಎ.ವಿ.ತೀರ್ಥರಾಮ, ರಾಜ್ಯ ಒಕ್ಕಲಿಗ ಸಂಘದ ಉಪಾಧ್ಯಕ್ಷ ಡಾ.ರೇಣುಕಾಪ್ರಸಾದ್ ಕೆ.ವಿ., ಗ್ರೀನ್ ಹೀರೋ ಆಫ್ ಇಂಡಿಯಾದ ಡಾ.ಆರ್.ಕೆ.ನಾಯರ್ ಜಾಲ್ಸೂರು, ಸವಣೂರು ವಿದ್ಯಾರಶ್ಮಿ ಶಿಕ್ಷಣ ಸಂಸ್ಥೆಗಳ ಸಂಚಾಲಕ ಕೆ.ಸೀತಾರಾಮ ರೈ ಸವಣೂರು, ಸುಳ್ಯ ಸೈಂಟ್ ಬ್ರಿಜಿಡ್ಸ್ ಚರ್ಚ್ ಧರ್ಮಗುರು ರೆ.ವಿಕ್ಟರ್ ಡಿಸೋಜ, ಸುಳ್ಯ ತಹಸೀಲ್ದಾರ್ ಅನಿತಾಲಕ್ಷ್ಮೀ, ಸುಳ್ಯ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್ ಎನ್., ವಾರ್ತಾ ಇಲಾಖೆ ಜಿಲ್ಲಾ ಹಿರಿಯ ಸಹಾಯಕ ನಿರ್ದೇಶಕ ಡಾ.ಹೆಚ್.ಜಿ.ರವಿರಾಜ್, ಮಂಗಳೂರು ಪತ್ರಕರ್ತರ ಸಂಘದ ರಾಷ್ಟ್ರೀಯ ಮಂಡಳಿ ಸದಸ್ಯ ಪಿ.ಬಿ.ಹರೀಶ್ ರೈ, ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ತಾರಾನಾಥ ಗಟ್ಟಿ ಕಾಪಿಕಾಡ್, ಬೆಂಗಳೂರು ಮಾಧ್ಯಮ ಅಕಾಡೆಮಿ ಸದಸ್ಯ ಬಾಳ ಜಗನ್ನಾಥ ಶೆಟ್ಟಿ, ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ರಾಜ್ಯಾಧ್ಯಕ್ಷ ನಾರಾಯಣ ಬಿ., ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಚನಿಯ ಕಲ್ತಡ್ಕ, ತಾ.ಪಂ. ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು, ಪ್ರಮುಖರಾದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಧನಂಜಯ ಅಡ್ಪಂಗಾಯ, ಕೆಪಿಸಿಸಿ ಸದಸ್ಯ ಎಚ್.ಎಂ. ನಂದಕುಮಾರ್ ಮಡಿಕೇರಿ, ಕೆಪಿಸಿಸಿ ಸಂಯೋಜಕ ಜಿ.ಕೃಷ್ಣಪ್ಪ, ಉದ್ಯಮಿ ಎಂ. ಮಾಧವ ಗೌಡ, ತಾ.ಪಂ. ಮಾಜಿ ಸದಸ್ಯ ಅಬ್ದುಲ್ ಗಫೂರ್, ತೆಕ್ಕಿಲ್ ಪ್ರತಿಷ್ಠಾನದ ಅಧ್ಯಕ್ಷ ಟಿ.ಎಂ.ಶಾಹೀದ್, ಕೋಟೆ ಫೌಂಡೇಶನ್ ನ ಗಾಯಕ ಶಶಿಧರ್ ಕೋಟೆ, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ್, ಜೆಡಿಎಸ್ ತಾಲೂಕು ಘಟಕದ ಅದ್ಯಕ್ಷ ಸುಕುಮಾರ್ ಕೋಡ್ತುಗುಳಿ, ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಉಜ್ವಲ್ ಎ.ಜೆ., ತಾರಸಿ ಕೃಷಿಕ ಪಡ್ಡಂಬೈಲು ಕೃಷ್ಣಪ್ಪ ಗೌಡ, ಕೆವಿಜಿ ಆಯುರ್ವೇದ ಕಾಲೇಜಿನ ಪ್ರಿನ್ಸಿಪಾಲ್ ಡಾ.ಲೀಲಾಧರ್, ಕೆ.ಎಂ.ಮುಸ್ತಫ, ಪಿ.ಎ.ಮಹಮ್ಮದ್, ನ.ಪಂ. ಸದಸ್ಯೆ ಶೀಲಾ ಅರುಣ್ ಕುರುಂಜಿ, ಸಿ.ಪಿ.ಎಂ. ಮುಖಂಡ ರಾಬರ್ಟ್ ಡಿಸೋಜ, ಆಮ್ ಆದ್ಮಿ ಮುಖಂಡ ಅಶೋಕ್ ಎಡಮಲೆ, ಕಾರ್ಯನಿರತ ಪತ್ರಕರ್ತರ ಸಂಘದ ಅದ್ಯಕ್ಷ ದಯಾನಂದ ಕೊರತ್ತಡಿ, ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಅಧ್ಯಕ್ಷ ಶಿವಪ್ರಸಾದ್ ಆಲೆಟ್ಟಿ ಉಪಸ್ಥಿತರಿದ್ದರು. ಪ್ರೆಸ್ ಕ್ಲಬ್ ಕಾರ್ಯದರ್ಶಿ ಗಂಗಾಧರ ಕಲ್ಲಪಳ್ಳಿ ಸ್ವಾಗತಿಸಿದರು. ಪ್ರೆಸ್ ಕ್ಲಬ್ ಅಧ್ಯಕ್ಷ ಹರೀಶ್ ಬಂಟ್ವಾಳ್ ಸಮಾರಂಭದ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಖಜಾಂಜಿ ಯಶ್ವಿತ್ ಕಾಳಮ್ಮನೆ ವಂದಿಸಿದರು. ದುರ್ಗಾಕುಮಾರ್ ನಾಯರ್‌ಕೆರೆ ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮ ದಲ್ಲಿ ಕಟ್ಟಡ ನಿರ್ಮಾಣಕ್ಕೆ ವಿವಿಧ ರೀತಿಯಲ್ಲಿ ಸಹಕಾರ ನೀಡಿದ ದಾನಿಗಳು, ಸಹಕರಿಸಿದ ಗಣ್ಯರಿಗೆ ಪ್ರೆಸ್ ಕ್ಲಬ್ ವತಿಯಿಂದ ಶಾಲು ಹೊದಿಸಿ, ಸ್ಮರಣಿಕೆ ನೀರಿ ಗೌರವಿಸಿ ಸಮ್ಮಾನಿಸಲಾಯಿತು. ಜಯಪ್ರಕಾಶ್ ಕುಕ್ಕೆಟ್ಟಿ ಸಮ್ಮಾನ ಕಾರ್ಯಕ್ರಮ ನಿರ್ವಹಿಸಿದರು.

ದೇಶ ಕಾಯುವ ಸೈನಿಕರು ಹೇಗೆ ದೇಶದ ರಕ್ಷಣೆ ಮಾಡುತ್ತಾರೆಯೇ, ಅದೇ ರೀತಿ ಪತ್ರಕರ್ತರು ಸಮಾಜದ ಅಂಕು ಡೊಂಕುಗಳನ್ನು ತಿದ್ದುವ ಮೂಲಕ ಸಮಾಜವನ್ನು ರಕ್ಷಿಸುವ ಕೆಲಸ ಮಾಡುತ್ತಿದ್ದಾರೆ. ಈ ಮೂಲಕ ಪತ್ರಕರ್ತರೂ ಸೈನಿಕರಂತೆ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಮಾಜ ತಿದ್ದುವ, ಸಮಾಜದ ಕೆಡುಕುಗಳನ್ನು ಹೊರಗೆ ಹಾಕುವ ಕೆಲಸವನ್ನು ಪತ್ರಕರ್ತರು ಮಾಡುತ್ತಾರೆ ಎಂದು ಶ್ರೀ ಕ್ಷೇತ್ರ ಒಡಿಯೂರು ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ನುಡಿದರು.
ಅವರು ಕಾರ್ಯಕ್ರಮದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ, ಆಶೀರ್ವಚನ ನೀಡಿದರು. ಆರ್ಥಿಕತೆ, ಪರಮಾರ್ಥಿಕತೆ ಜತೆಯಾಗಿ ಹೋದಾಗ ಸಮಾಜದ ಉದ್ಧಾರ ಸಾಧ್ಯವಿದೆ. ಪತ್ರಕರ್ತರು ಸಂಘಟನೆ ಮೂಲಕ ಒಗ್ಗಟ್ಟಾದಾಗ ಇಲ್ಲಿ ನಿರ್ಮಿಸಿದಂತದ ಸುಸಜ್ಜಿತ ಕಟ್ಟಡ ನಿರ್ಮಿಸಲು ಸಾಧ್ಯ ಎಂಬುದನ್ನು ಸುಳ್ಯದ ಪತ್ರಕರ್ತರು ತೋರಿಸಿಕೊಟ್ಟಿದ್ದಾರೆ. ಎಲ್ಲರಲ್ಲೂ ಧರ್ಮ ಇದ್ದಂತೆ ಪತ್ರಕರ್ತರಲ್ಲೂ ಇರುವ ಪತ್ರಿಕಾ ಧರ್ಮದಂತೆ ಅವರು ನಡೆಯಬೇಕು ಎಂದ ಅವರು ಬದುಕು ಸಮರಸದಿಂದ ಕೂಡಿದ್ದಾಗ ಬದುಕು ಬದುಕಾಗಲಿದೆ ಎಂದರು.

ಪ್ರೆಸ್ ಕ್ಲಬ್ ಕಟ್ಟಡದ ಉದ್ಘಾಟನೆ ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ ವಿಧುಷಿ ವಿಭಾ ಶ್ರೀನಿವಾಸ ನಾಯಕ್ ಅವರಿಂದ ಶಾಸ್ತ್ರೀಯ ಸಂಗೀತ ಕಚೇರಿ ನಡೆಯಿತು. ಇವರಿಗೆ ತಬಲಾದಲ್ಲಿ ಉಪೇಂದ್ರ ಮಲ್ಯ, ಹಾರ್ಮೋನಿಯಂನಲ್ಲಿ ಕಿಶನ್ ಪ್ರಭು ಸಹಕರಿಸಿದರು. ಮಧ್ಯಾಹ್ನ ಖ್ಯಾತ ಗಾಯಕ ಶಶಿಧರ್ ಕೋಟೆ ಮತ್ತು ಅವರ ಬಳಗದಿಂದ ಸಂಗೀತ ಸುಧೆ ನಡೆಯಿತು. ಇವರಿಗೆ ಕೀಬೋರ್ಡ್ ವಾದನದಲ್ಲಿ ವಿದ್ವತ್ ಶಿವಾನಂದ ಜಾಯಿಸ್, ಮ್ಯಾಂಡೋಲಿನ್ ನಲ್ಲಿ ಕಾರ್ತಿಕ್. ಎಲ್.ಎಸ್, ತಬಲಾದಲ್ಲಿ ಅರುಣ್ ಕುಮಾರ್ ಸಹಕರಿಸಿದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!