ಮಾವಿನಕಟ್ಟೆ ಚಿರಾಯು ಆರ್ಟ್ಸ್ & ಸ್ಪೋರ್ಟ್ಸ್ ಕ್ಲಬ್, ಗ್ರಾಮ ಪಂಚಾಯತ್ ದೇವಚಳ್ಳ, ಆರೋಗ್ಯ ಉಪಕೇಂದ್ರ ಎಲಿಮಲೆ ಮತ್ತು ಸ್ಥಳೀಯ ಸಂಘ ಸಂಸ್ಥೆಗಳ ಆಶ್ರಯದಲ್ಲಿ ರೋಟರಿ ಕ್ಯಾಂಸ್ಕೋ ಬ್ಲಡ್ ಸೆಂಟರ್ ಪುತ್ತೂರು ಇವರ ಸಹಯೋಗದೊಂದಿಗೆ ರಕ್ತದಾನ ಶಿಬಿರ, ರಕ್ತವರ್ಗೀಕರಣ ಹಾಗೂ ಮಾಹಿತಿ ಶಿಬಿರ ಹಾಗೂ 100 ಬಾರಿಗೆ ರಕ್ತದಾನ ಮಾಡುತ್ತಿರುವ ಶೈಲೇಶ್ ಅಂಬೆಕಲ್ಲು ಅವರಿಗೆ ಸನ್ಮಾನ ಕಾರ್ಯಕ್ರಮ ಡಿ.4 ರಂದು ಎಲಿಮಲೆ ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಿತು.
ತಹಶೀಲ್ದಾರ್ ಕು. ಅನಿತಾಲಕ್ಷ್ಮಿ ಶಿಬಿರ ಉದ್ಘಾಟನೆ ನೆರವೇರಿಸಿದರು. ಗ್ರಾ.ಪಂ.ಅಧ್ಯಕ್ಷೆ ಸುಲೋಚನಾ ದೇವ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪುತ್ತೂರು ಡಿ.ವೈ.ಎಸ್.ಪಿ. ವೀರಯ್ಯ ಹಿರೇಮಠ್, ಎಲಿಮಲೆಯ ಮೈತ್ರೇಯ ಕ್ಲಿನಿಕ್ ನ ಡಾ. ಚೈತ್ರಭಾನು, ಕೆ.ವಿ.ಜಿ. ಸುಳ್ಯ ಹಬ್ಬ ಸಮಿತಿಯ ಅಧ್ಯಕ್ಷ ದೊಡ್ಡಣ್ಣ ಬರೆಮೇಲು, ಸುಳ್ಯದ ಯುವಜನಾ ಸೇವಾ ಸಂಸ್ಥೆಯ ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ, ಎಸ್.ಡಿ.ಎಂ.ಸಿ. ಕಾರ್ಯಾಧ್ಯಕ್ಷ ಜಯಂತ ಹರ್ಲಡ್ಕ, ಗುತ್ತಿಗಾರು ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಚಂದ್ರಶೇಖರ ಕಡೋಡಿ, ದೇವಚಳ್ಳ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಬಿ.ಗುರುಪ್ರಸಾದ್, ಎಲಿಮಲೆ ಸಮುದಾಯ ಆರೋಗ್ಯ ಕೇಂದ್ರದ ಕು. ಮೋನಿಷಾ ಜೆ.ಎಸ್., ಚಿರಾಯು ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಜಯಂತ್ ಮೆತ್ತಡ್ಕ ಉಪಸ್ಥಿತರಿದ್ದರು.ತಾಲೂಕು ಆರೋಗ್ಯಾಧಿಕಾರಿ ಡಾ . ನಂದಕುಮಾರ್ ರಕ್ತದಾನದ ಬಗ್ಗೆ ಮಾಹಿತಿ ನೀಡಿದರು.
62 ಜನ ರಕ್ತದಾನ ಮಾಡುವ ಮೂಲಕ ಸಮಾಜಸೇವೆಯಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ 57 ಜನರಿಗೆ ಉಚಿತವಾಗಿ ಆಯುಷ್ಮಾನ್ ಕಾರ್ಡ್ ಮಾಡಿಸಿಕೊಡಲಾಯಿತು. ಬೆಳಗ್ಗಿನ ಉಪಹಾರವನ್ನು ಸಂತೃಪ್ತಿ ಹೋಟೆಲ್ ನ ನವೀನ್, ಮಧ್ಯಾಹ್ನದ ಭೋಜನ ವ್ಯವಸ್ಥೆಯನ್ನು ಸುಳ್ಯದ ಕಸ್ತೂರಿ ನರ್ಸರಿಯ ಮಧುಸೂದನ್ ನೀಡಿದರು. ಭಾರತೀಯ ಜನೌಷಧಿ ಕೇಂದ್ರದ ಭವಿತ್ ಹಾಗೂ ಹಿಮಗಿರಿ ಮೆಡಿಕಲ್ ನವರು ಸಹಕರಿಸಿದರು.
ರಾಜೇಶ್ ಅಂಬೆಕಲ್ಲು ಸ್ವಾಗತಿಸಿ, ಕಿರಣ್ ಗುಡ್ಡೆಮನೆ ವಂದಿಸಿದರು. ಮುರಳೀಧರ ಪುನ್ಕುಟ್ಟಿ ನಿರೂಪಿಸಿದರು.