
ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (ವಿಟಿಯು) ಎಕ್ಸಿಕ್ಯುಟಿವ್ ಕೌನ್ಸಿಲ್ ಸದಸ್ಯರಾಗಿ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥ ಮತ್ತು ಕೆ.ವಿ.ಜಿ. ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್ ಊರುಬೈಲು ನೇಮಕಗೊಂಡಿರುತ್ತಾರೆ. ಕರ್ನಾಟಕ ರಾಜ್ಯಪಾಲರು ಹಾಗೂ ವಿಶ್ವವಿದ್ಯಾಲಯದ ಕುಲಪತಿಗಳಾದ ತಾವರ್‌ಚಂದ್ ಗೆಹ್ಲೋಟ್‌ರವರ ನಿರ್ದೇಶನದಂತೆ, ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಡಾ. ವಿದ್ಯಾಶಂಕರ್ ಎಸ್. ಅವರು ಆದೇಶ ನೀಡಿರುತ್ತಾರೆ.
ಕೊಡಗಿನ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ದಿ.ಜಯಪ್ರಕಾಶ್ ಮತ್ತು ಲೀಲಾವತಿ ದಂಪತಿಗಳ ಹಿರಿಯ ಪುತ್ರರಾಗಿರುವ ಡಾ. ಉಜ್ವಲ್ ಊರುಬೈಲು ಕಳೆದ ೨೧ ವರ್ಷಗಳಿಂದ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ ವಿಭಾಗದಲ್ಲಿ ಪ್ರೊಫೆಸರಾಗಿ, ವಿಭಾಗ ಮುಖ್ಯಸ್ಥರಾಗಿ ಪ್ರಸ್ತುತ ಕೆ.ವಿ.ಜಿ. ವಿದ್ಯಾಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ತನ್ನ ಎಂ.ಟೆಕ್. ಪದವಿಯನ್ನು ಎನ್.ಐ.ಟಿ.ಕೆ. ಸುರತ್ಕಲ್‌ನಲ್ಲಿ ಹಾಗೂ ಡಾಕ್ಟರೇಟ್ ಪದವಿಯನ್ನು ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿಭಾಗದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ಬೆಳಗಾವಿಯಲ್ಲಿ ಪಡೆದಿರುತ್ತಾರೆ. ಇವರ ಸಂಶೋಧನೆಗಳಿಗೆ ಕೇಂದ್ರ ಸರಕಾರದಿಂದ ಎರಡು ಪೇಟೆಂಟ್ ಪಡೆದಿರುತ್ತಾರೆ.